ಶನಿವಾರ, ಜುಲೈ 31, 2021
28 °C
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ 23ನೇ ಸಂಸ್ಥಾಪನಾ ದಿನಾಚರಣೆ

2500 ಚಾಲಕ, ನಿರ್ವಾಹಕರ ನೇಮಕ ಶೀಘ್ರ: ಸಚಿವ ಜಗದೀಶ್ ಶೆಟ್ಟರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 2500 ಚಾಲಕ, ನಿರ್ವಾಹಕರ ಹುದ್ದೆಗಳ ನೇಮಕಕ್ಕೆ ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿದ್ದು, ಶೀಘ್ರದಲ್ಲೇ ನೇಮಕ ಮಾಡಿಕೊಳ್ಳಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಹೇಳಿದರು.

ಸಂಸ್ಥೆಯ 23ನೇ ಸಂಸ್ಥಾಪನಾ ದಿನಾಚರಣೆಯನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದ ಅವರು, ತೀವ್ರ ನಷ್ಟದಲ್ಲಿರುವ ಸಂಸ್ಥೆಯ ಹಿತದೃಷ್ಟಿಯಿಂದ ಮುಂದಿನ ಐದು ವರ್ಷಗಳ ಕಾಲ ವಾಹನ ತೆರಿಗೆ ವಿನಾಯ್ತಿ ನೀಡುವಂತೆ ಹಾಗೂ ವಿದ್ಯಾರ್ಥಿ ಬಸ್‌ಪಾಸ್‌ಗೆ ಸಂಬಂಧಿಸಿದಂತೆ ಬಾಕಿ ಇರುವ ₹ 722 ಕೋಟಿಯನ್ನು ಸರ್ಕಾರ ಮರುಪಾವತಿಸುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಲಾಗುವುದು ಎಂದರು.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್‌.ಪಾಟೀಲ ಮಾತನಾಡಿ, ವಾಹನ ತೆರಿಗೆ, ಡೀಸೆಲ್‌ ತೆರಿಗೆ ಮತ್ತು ಟೋಲ್‌ ಶುಲ್ಕದಿಂದ ಸಂಸ್ಥೆಯ ಬಸ್‌ಗಳಿಗೆ ವಿನಾಯ್ತಿ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.

ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ಪ್ರಯಾಣಿಕರ ಸಂಖ್ಯೆ ವಿರಳವಾಗಿರುವ ಮಾರ್ಗಗಳಲ್ಲಿ ಬಸ್‌ ಓಡಿಸುತ್ತಿರುವುದರಿಂದ ಸಂಸ್ಥೆ ನಷ್ಠ ಅನುಭವಿಸುತ್ತಿದ್ದು, ಇಂತಹ ಮಾರ್ಗಗಳಲ್ಲಿ ಬಸ್‌ ಸಂಚಾರವನ್ನು ರದ್ದುಪಡಿಸಬೇಕು. ಅಗತ್ಯವಿರುವ ಮಾರ್ಗಗಳಲ್ಲಿ ಮಾತ್ರ ಸಮಯಕ್ಕೆ ಸರಿಯಾಗಿ ಬಸ್‌ ಓಡಿಸಬೇಕು ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು