ಸೋಮವಾರ, ಜುಲೈ 26, 2021
26 °C

ಕೆಎಸ್ಆರ್‌ಟಿಸಿ | ಬುಧವಾರದಿಂದ ಅಂತರರಾಜ್ಯ ಬಸ್ ಸಂಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಇದೇ 17ರಿಂದ ಅಂತರರಾಜ್ಯ ಬಸ್ ಸಂಚಾರ ಆರಂಭಿಸಲು ಕೆಎಸ್ಆರ್‌ಟಿಸಿ ನಿರ್ಧರಿಸಿದೆ.

ಮೊದಲ ಹಂತದಲ್ಲಿ ಆಂಧ್ರ ಪ್ರದೇಶದ ವಿವಿಧ ನಗರಗಳಿಗೆ ಹವಾನಿಯಂತ್ರಿತ ರಹಿತ ಬಸ್ ಸಂಚಾರ ಆರಂಭವಾಗಲಿದೆ. ಬೆಂಗಳೂರಿನಿಂದ ಅನಂತಪುರ, ಹಿಂದುಪುರ, ಕದ್ರಿ, ಪುಟ್ಟಪರ್ತಿ, ಕಲ್ಯಾಣದುರ್ಗ, ರಾಯದುರ್ಗ, ಕಡಪ, ಪ್ರೂದತ್ತೂರು, ಮಂತ್ರಾಲಯ, ತಿರುಪತಿ, ಚಿತ್ತೂರು, ಮದನಪಲ್ಲಿ, ನೆಲ್ಲೂರು ಮತ್ತು ವಿಜಯವಾಡಕ್ಕೆ ಬಸ್‌ಗಳು ಕಾರ್ಯಾಚರಣೆಗೊಳ್ಳಲಿವೆ.

ಬಳ್ಳಾರಿಯಿಂದ ವಿಜಯವಾಡ, ಅನಂತಪುರ, ಕರ್ನೂಲು ಮತ್ತು ಮಂತ್ರಾಲಯಕ್ಕೆ, ರಾಯಚೂರನಿಂದ ಮಂತ್ರಾಲಯ ಮತ್ತು ಕರ್ನೂಲಿಗೆ ಬಸ್‌ಗಳ ಸಂಚಾರ ಆರಂಭವಾಗಲಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು