ಬುಧವಾರ, ಮಾರ್ಚ್ 3, 2021
26 °C

ಸಾರಿಗೆ ಸಂಸ್ಥೆ ನೌಕರರಿಗೆ ಏಪ್ರಿಲ್‌ ತಿಂಗಳ ವೇತನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ನಾಲ್ಕೂ ಸಾರಿಗೆ ಸಂಸ್ಥೆಗಳ ನೌಕರರಿಗೆ ಏಪ್ರಿಲ್‌ ತಿಂಗಳ ಪೂರ್ಣ ವೇತನ ಸಿಗಲಿದೆ.

ಏಪ್ರಿಲ್‌ ತಿಂಗಳ ವೇತನಕ್ಕಾಗಿ ₹325.01 ಕೋಟಿ ಮತ್ತು ಮೇ ತಿಂಗಳ ವೇತನಕ್ಕಾಗಿ ಶೇ 50 ರಷ್ಟು ಅನುದಾನ ಬಿಡುಗಡೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೋವಿಡ್‌–19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾಯವ್ಯ ಸಾರಿಗೆ ಸಂಸ್ಥೆ ಮತ್ತು ಈಶಾನ್ಯ ಸಾರಿಗೆ ಸಂಸ್ಥೆಗಳು ಆದಾಯವಿಲ್ಲದೆ ಸಂಕಷ್ಟಕ್ಕೆ ತುತ್ತಾಗಿವೆ.

ಈ ಹಿನ್ನೆಲೆಯಲ್ಲಿ ವೇತನಕ್ಕಾಗಿ ತಿಂಗಳಿಗೆ ₹364 ಕೋಟಿಯಂತೆ ಮೂರು ತಿಂಗಳ ವೇತನಕ್ಕಾಗಿ ಅನುದಾನ ನೀಡಬೇಕು ಎಂದು ಸಾರಿಗೆ ಕೋರಿಕೆ ಸಲ್ಲಿಸಿತ್ತು.

ವಿದ್ಯಾರ್ಥಿ ಪಾಸ್‌ಗಳಿಗಾಗಿ ಸಹಾಯಧನ ಶೀರ್ಷಿಕೆಯಡಿ ಒದಗಿಸಿರುವ ಅನುದಾನದಿಂದ ಏಪ್ರಿಲ್‌ ತಿಂಗಳ ವೇತನದ ಶೇ 50 ರಷ್ಟನ್ನು  ಭರಿಸಬೇಕು. ಉಳಿದ ಶೇ 50 ರಷ್ಟು ಮೊತ್ತವನ್ನು ವಿದ್ಯಾರ್ಥಿ ಬಸ್‌ಪಾಸ್‌ ಸಹಾಯಧನದ ಲೆಕ್ಕ ಶೀರ್ಷಿಕೆಯಡಿ ಭರಿಸಲು ಮುಂಗಡವಾಗಿ ಬಿಡುಗಡೆಗೊಳಿಸಲಾಗಿದೆ. ಅದನ್ನು ಬಳಸಿಕೊಳ್ಳಬೇಕು ಎಂದು ಸರ್ಕಾರ ಆದೇಶದಲ್ಲಿ ಸೂಚಿಸಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು