ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರಣಿ ರಜೆ: 200 ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ

Last Updated 23 ಜನವರಿ 2019, 18:56 IST
ಅಕ್ಷರ ಗಾತ್ರ

ಬೆಂಗಳೂರು: ಸರಣಿ ರಜೆಗಳು ಬಂದ ಕಾರಣ ಜ. 26ರಿಂದ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 200 ಹೆಚ್ಚುವರಿ ಬಸ್‌ ಸಂಚಾರ ನಡೆಯಲಿದೆ.

ಜ.25 ಮತ್ತು 26ರಂದು ನಗರದಿಂದ ವಿವಿಧ ಭಾಗಗಳಿಗೆ ಈ ಹೆಚ್ಚುವರಿ ಬಸ್‌ಗಳು ಸಂಚರಿಸಲಿವೆ. ಜ. 27ರಂದು ಹೊರರಾಜ್ಯದ ಬೇರೆ ಬೇರೆ ಸ್ಥಳಗಳಿಂದ ಬೆಂಗಳೂರಿಗೆ ಬಸ್‌ಗಳು ಸಂಚರಿಸಲಿವೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರ್ಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿಗೆ,ಮೈಸೂರು ರಸ್ತೆ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಕಡೆಗೆ ಬಸ್‌ಗಳು ತೆರಳಲಿವೆ.

ಶಾಂತಿನಗರದಲ್ಲಿನ ಬೆಂಗಳೂರು ಕೇಂದ್ರ ಘಟಕ-4 ಮತ್ತು ಘಟಕ-2ರಿಂದ ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣದ ಕಡೆಗೆ ಪ್ರತಿಷ್ಠಿತ ಸಾರಿಗೆ ವಾಹನಗಳು ಸಂಚರಿಸಲಿವೆ.

ನಗರದ ಶ್ರೀಬಸವೇಶ್ವರ ಬಸ್ ನಿಲ್ದಾಣ, ವಿಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್(ರಾಜಾಜಿನಗರ), ಮಲ್ಲೇಶ್ವರ 18ನೇ ಅಡ್ಡರಸ್ತೆ, ಬನಶಂಕರಿ, ಜೀವನ್ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ, ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂಗಡ ಬುಕ್ಕಿಂಗ್‌ ಮತ್ತು ಹೆಚ್ಚಿನ ಮಾಹಿತಿಗೆhttps://ksrtc.in ಜಾಲತಾಣ ನೋಡಬಹುದು ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT