ಗುರುವಾರ , ನವೆಂಬರ್ 14, 2019
22 °C

ಕೆಎಸ್‌ಆರ್‌ಟಿಸಿ, ಬಿಎಂಟಿಸಿ ವಿದ್ಯಾರ್ಥಿ ಬಸ್‌ ಪಾಸ್ ದರ ಏರಿಕೆ?

Published:
Updated:

ಬೆಂಗಳೂರು: ವಿದ್ಯಾರ್ಥಿಗಳ ಬಸ್ ಪಾಸ್ ದರ ಏರಿಸಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಆದೇಶ ಹೊರಡಿಸಿದ್ದು, ಇದರ ಬೆನ್ನಲ್ಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಕೂಡ ಪಾಸ್ ದರವನ್ನು ಕನಿಷ್ಠ ₹100ರಿಂದ 200ರಷ್ಟು ಏರಿಸಲು ಸಿದ್ಧತೆ ಮಾಡಿಕೊಂಡಿದೆ.

ಇದನ್ನೂ ಓದಿ: ಬಿಎಂಟಿಸಿ ವಿದ್ಯಾರ್ಥಿ ಪಾಸ್ ದರ ಏರಿಕೆ

ಕಳೆದ 8 ವರ್ಷಗಳಿಂದ ಪಾಸ್ ದರ ಏರಿಕೆ ಮಾಡಿಲ್ಲ. ಈ ವರ್ಷ ದರ ಏರಿಕೆ ಮಾಡಲು ಸರ್ಕಾರ ಅನುಮೋದನೆ ನೀಡಿದೆ ಎಂದು ಕೆಎಸ್‌ಆರ್‌ಟಿಸಿ ಮೂಲಗಳು ‘‍ಪ್ರಜಾವಾಣಿ’ಗೆ ತಿಳಿಸಿವೆ.

ಪ್ರೌಢಶಾಲೆ ವಿದ್ಯಾರ್ಥಿಗಳ ಪಾಸ್ ದರದಲ್ಲಿ ₹100, ಕಾಲೇಜು ವಿದ್ಯಾರ್ಥಿಗಳಿಗೆ ₹150 ಮತ್ತು ವೃತ್ತಿಪರ ಕೋರ್ಸ್‌ಗಳ ವಿದ್ಯಾರ್ಥಿಗಳ ಪಾಸ್ ದರದಲ್ಲಿ ₹200 ಏರಿಕೆಯಾಗಲಿದೆ. ಹೊಸ ದರದಂತೆ ಒಂದೆರಡು ದಿನಗಳಲ್ಲಿ ಪಾಸ್ ವಿತರಣೆ ಮಾಡಲಾಗುವುದು ಎಂದು ಇವೇ ಮೂಲಗಳು ಹೇಳಿವೆ.

ಪ್ರತಿಕ್ರಿಯಿಸಿ (+)