ಮಂಗಳವಾರ, ಅಕ್ಟೋಬರ್ 27, 2020
29 °C

ಕೊರೊನಾ ಹಿನ್ನೆಲೆಯಲ್ಲಿ ಕ್ರಮ: ವಿಆರ್‌ಎಸ್‌ ಜಾರಿಗೆ ತಂದ ಕೆಎಸ್‌ಆರ್‌ಟಿಸಿ

ಪ್ರಜಾವಾಣಿ ವಾರ್ತೆ  Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೆಲಸ ಮಾಡಲು ಸಾಧ್ಯವಾಗದಷ್ಟು ಅನಾರೋಗ್ಯ ಇರುವ ಅಧಿಕಾರಿಗಳು ಮತ್ತು ನೌಕರರಿಗೆ ಸ್ವಯಂ ನಿವೃತ್ತಿ ಯೋಜನೆಯನ್ನು (ವಿಆರ್‌ಎಸ್‌) ಕೆಎಸ್‌ಆರ್‌ಟಿಸಿ ಪ್ರಕಟಿಸಿದ್ದು, ಈ ಕುರಿತ ಅರ್ಜಿಗಳನ್ನು ಪರಿಶೀಲಿಸಿ, ಅಂಗೀಕರಿಸಲು ವಿಭಾಗೀಯ ಮಟ್ಟದಲ್ಲಿಯೇ ಸಮಿತಿಗಳನ್ನು ಮಂಗಳವಾರ ರಚನೆ ಮಾಡಿದೆ. 

‘ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ, ಆಡಳಿತಾತ್ಮಕ ಕಾರಣದಿಂದ ಮತ್ತು ನೌಕರರ ಹಿತದೃಷ್ಟಿಯಿಂದ ಈ ಯೋಜನೆ ಘೋಷಿಸಲಾಗಿದೆ. ಸ್ವಯಂ ನಿವೃತ್ತಿ ತೆಗೆದುಕೊಳ್ಳುವವರಿಗೆ ಆಕರ್ಷಕ ಪರಿಹಾರವೂ ಸಿಗಲಿದೆ’ ಎಂದೂ ನಿಗಮ ಹೇಳಿದೆ.  

ದರ್ಜೆ 3 ಮತ್ತು ದರ್ಜೆ 4ರ ನೌಕರರ ಅರ್ಜಿಗಳನ್ನು ಪರಿಶೀಲಿಸಲು, ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಈ ನೌಕರರ ಅರ್ಜಿಗಳನ್ನು ಆಯಾ ಆಡಳಿತ ನಿಯಂತ್ರಣಕ್ಕೆ ಒಳಪಟ್ಟ ವಿಭಾಗದ ಸಮಿತಿಯೇ ಪರಿಶೀಲಿಸಿ ಅಂಗೀಕರಿಸಲು ಸೂಚಿಸಲಾಗಿದೆ. ಎಲ್ಲ ಅಧಿಕಾರಿಗಳು ಅಥವಾ ದರ್ಜೆ 3ರ ಮೇಲ್ವಿಚಾರಕ ನೌಕರರ ಹಾಗೂ ಕೇಂದ್ರ ಕಚೇರಿ ನೌಕರರ ಅರ್ಜಿ ಪರಿಶೀಲಿಸಿ ಅಂಗೀಕರಿಸಲು ಕೇಂದ್ರಕಚೇರಿ ಮಟ್ಟದ ಸಮಿತಿಗೆ ಸೂಚಿಸಲಾಗಿದೆ. 

‘2012 ಅಕ್ಟೋಬರ್‌ 12ರ ಸುತ್ತೋಲೆಯ ನಿರ್ದೇಶನಗಳನ್ನು ಗಮನದಲ್ಲಿಟ್ಟುಕೊಂಡು, ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಕ್ರಮ ಕೈಗೊಳ್ಳಬೇಕು’ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಸೂಚಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು