ಗುರುವಾರ , ಏಪ್ರಿಲ್ 2, 2020
19 °C

ಕುಕ್ಕೆ ದೇವರ ದರ್ಶನ ಪಡೆದ ಕ್ರಿಕೆಟಿಗ ಮನೀಷ್ ಪಾಂಡೆ ದಂಪತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುಬ್ರಹ್ಮಣ್ಯ: ಭಾರತ ಕ್ರಿಕೆಟ್ ತಂಡದ ಖ್ಯಾತ ಆಟಗಾರ ಹಾಗೂ ಕರ್ನಾಟಕ ಏಕದಿನ  ತಂಡದ ನಾಯಕ ಮನೀಶ್ ಪಾಂಡೆ ದಂಪತಿ ಕಡಬ ತಾಲ್ಲೂಕಿನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಮನೀಷ್ ಪಾಂಡೆ ತಮ್ಮ ಪತ್ನಿ ಆಶ್ರಿತಾ ಶೆಟ್ಟಿ ಜೊತೆ ನಾಗರಾಧನಾ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶನಿವಾರ  ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು. 

ಡಿಸೆಂಬರ್ ತಿಂಗಳಿನಲ್ಲಿ ಮನೀಶ್ ಪಾಂಡೆ ತುಳುನಾಡಿನ ಬೆಡಗಿ, ತಮಿಳು ಹಾಗೂ ತುಳು ನಟಿ ಆಶ್ರಿತಾ ಶೆಟ್ಟಿ ಜೊತೆ  ಮುಂಬಯಿಯಲ್ಲಿ ವಿವಾಹವಾಗಿದ್ದರು.

ವಿವಾಹದ ಬಳಿಕ ಮೊದಲ ಬಾರಿಗೆ ಶುಕ್ರವಾರ ಕುಕ್ಕೆ ಸುಬ್ರಹಣ್ಯಕ್ಕೆ ತಮ್ಮ ಗೆಳೆಯನ ಜೊತೆ ಆಗಮಿಸಿದ ದಂಪತಿ ಇಲ್ಲಿನ ಖಾಸಗಿ ವಸತಿಗೃಹದಲ್ಲಿ ತಂಗಿದ್ದರು. 

ಶನಿವಾರ ಬೆಳಿಗ್ಗೆ ದಂಪತಿ ದೇವಸ್ಥಾನಕ್ಕೆ ಭೇಟಿ ನೀಡಿ, ಆಶ್ಲೇಷ ಪೂಜಾ ಸೇವೆ ನೆರೆವೇರಿಸಿದರು. ಬಳಿಕ  ಆದಿ ಸುಬ್ರಹ್ಮಣ್ಯಕ್ಕೆ ತೆರಳಿ ದೇವರ ದರ್ಶನ ಪಡೆದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು