ಕುಕ್ಕೆ ದೇಗುಲಕ್ಕೆ ₹98.92 ಕೋಟಿ ಆದಾಯ
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ 2019-20ನೇ ಸಾಲಿನಲ್ಲಿ ₹98.92 ಕೋಟಿ ಆದಾಯ ಲಭಿಸಿದೆ ಎಂದು ದೇವಸ್ಥಾನದ ಮೂಲಗಳು ತಿಳಿಸಿವೆ.
ದೇವಸ್ಥಾನಕ್ಕೆ ಮುಖ್ಯವಾಗಿ ಹರಕೆ ಸೇವೆ, ಕಾಣಿಕೆ ಡಬ್ಬಿ, ಬಡ್ಡಿ, ಛತ್ರಗಳ ಬಾಡಿಗೆ, ಕಟ್ಟಡಗಳ ಬಾಡಿಗೆ ಮತ್ತು ಕೃಷಿ ತೋಟದಿಂದ ಆದಾಯವು ಬರುತ್ತದೆ.
ಮುಜರಾಯಿ ಇಲಾಖೆ ಈ ಹಿಂದೆ ಪ್ರಕಟಿಸಿದ್ದಂತೆ ಕುಕ್ಕೆ ದೇಗುಲದ ಆದಾಯ ಕಳೆದ ವರ್ಷ ₹ 100 ಕೋಟಿ ಇತ್ತು. ಈ ವರ್ಷ ಆದಾಯ ಸುಮಾರು ₹ 1 ಕೋಟಿ ಇಳಿಕೆಯಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.