‘ವಸತಿ ಶಾಲೆ ಸುಧಾರಣೆಗೆ ಕ್ರಮ’

7

‘ವಸತಿ ಶಾಲೆ ಸುಧಾರಣೆಗೆ ಕ್ರಮ’

Published:
Updated:

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳು ಹಾಗೂ ವಸತಿ ನಿಲಯಗಳ ಸಮಗ್ರ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ಕುರಿತು ನಿರ್ದೇಶನ ನೀಡಿದರು.

ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳು ಹಾಗೂ ವಸತಿ ನಿಲಯಗಳ ಸಮಗ್ರ ಸುಧಾರಣೆಗೆ ಪರಿಣಿತರ ಸಮಿತಿ ನೀಡುವ ವರದಿ ಆಧರಿಸಿ ಸಮಗ್ರ ಸುಧಾರಣೆಗೆ ಕ್ರಮ ಕೈಗೊಳ್ಳುವುದಾಗಿ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಅವರಿಗೆ ತಿಳಿಸಿದರು.

ವಸತಿ ಶಾಲೆಗಳು ಹಾಗೂ ವಸತಿ ನಿಲಯಗಳನ್ನು ನವೋದಯ ಮಾದರಿ ವಸತಿ ಶಾಲೆಗಳಂತೆ ಉನ್ನತೀಕರಿಸುವ ಉದ್ದೇಶದಿಂದ ಅಧ್ಯಯನ ಮಾಡಲು ಪರಿಣತರ ಸಮಿತಿ ರಚಿಸಲಾಗಿದೆ. ಸಮಿತಿಯು ಮೂರು ತಿಂಗಳಲ್ಲಿ ವರದಿ ನೀಡಲಿದೆ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !