ಭಾನುವಾರ, ಸೆಪ್ಟೆಂಬರ್ 26, 2021
21 °C

ಯಡಿಯೂರಪ್ಪ ಟೀಕೆ ಹಾಸ್ಯಾಸ್ಪದ: ಸಿಎಂ ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯವು ಬರದಿಂದ ತತ್ತರಿಸುವಾಗ ಸರ್ಕಾರ ಮೋಜು ಮಸ್ತಿಯಲ್ಲಿ ಮೈಮರೆತಿದೆ ಎಂದು ವಿರೋಧ ಪಕ್ಷದ ನಾಯಕ ಯಡಿಯೂರಪ್ಪ ಮಾಡಿರುವ ಟೀಕೆ ಹಾಸ್ಯಾಸ್ಪದವಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. 

ರಾಜ್ಯದಲ್ಲಿ ಆರೋಗ್ಯ ಪ್ರವಾಸೋದ್ಯಮ ಪ್ರವರ್ಧಮಾನಕ್ಕೆ ಬರುತ್ತಿದ್ದು ಅಂತಹ ಒಂದು ಕೇಂದ್ರದಲ್ಲಿ ನಾನು ಚಿಕಿತ್ಸೆ ಪಡೆಯುತ್ತಿದ್ದೇನೆ ಯಡಿಯೂರಪ್ಪನವರು ಕೇವಲ ಸುದ್ದಿಗಾಗಿ ಇಂತಹ ಹೇಳಿಕೆಗಳನ್ನು ನೀಡುವ ಪ್ರವೃತ್ತಿಯನ್ನು ಕೈಬಿಡುವುದು ಒಳಿತು ಎಂದು ಕುಮಾರಸ್ವಾಮಿ ಸಲಹೆ ಮಾಡಿದ್ದಾರೆ. 

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅತ್ಯುತ್ತಮ ಅಧಿಕಾರಿಗಳಿದ್ದು ಅವರು ಈ ಅವಧಿಯಲ್ಲಿ ದಕ್ಷತೆಯಿಂದ ಕೆಲಸ ಮಾಡುತ್ತಿದ್ದಾರೆ, ಬರಪರಿಹಾರ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಮುಖ್ಯಕಾರ್ಯದರ್ಶಿಗಳು ನಿಯಮಿತವಾಗಿ ಮಾಹಿತಿಯನ್ನೂ ನೀಡಿದ್ದಾರೆ. ಉಡುಪಿಗೆ ತೆರಳುವ ಮುನ್ನ ಮುಖ್ಯಕಾರ್ಯದರ್ಶಿಯವರೊಂದಿಗೆ ಮಾತನಾಡಿ ಅಗತ್ಯಸೂಚನೆಗಳನ್ನು ನೀಡಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ಉಡುಪಿ ಸಮೀಪದ ಕಾಪುವಿನಲ್ಲಿರುವ ಆಯುರ್ವೇದ ಚಿಕಿತ್ಸಾಲಯದಲ್ಲಿ ಕುಮಾರಸ್ವಾಮಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.ಲೋಕಸಭಾ ಚುನಾವಣೆ ಮುಗಿದ ತಕ್ಷಣವೇ ಅವರು ಚಿಕಿತ್ಸೆಯ ಮೊರೆ ಹೋಗಿದ್ದಾರೆ. 

 ಇದನ್ನೂ ಓದಿ: ಆಯುರ್ವೇದ ಚಿಕಿತ್ಸೆಗಾಗಿ ಉಡುಪಿಗೆ ಕುಮಾರಸ್ವಾಮಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು