ಮಂಗಳವಾರ, ಫೆಬ್ರವರಿ 18, 2020
18 °C

ರಾಮನಗರಕ್ಕೆ ಅನ್ಯಾಯ ಮಾಡಬೇಡಿ: ಎಚ್‌ಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಯಡಿಯೂರಪ್ಪನವರೇ, ನನ್ನ ಮೇಲಿನ ದ್ವೇಷಕ್ಕೆ ರಾಮನಗರಕ್ಕೆ ಅನ್ಯಾಯ ಮಾಡಬೇಡಿ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ರಾಮನಗರ ಜಿಲ್ಲೆಗೆ ಮಂಜೂರಾಗಿರುವ ಯೋಜನೆಗಳನ್ನು ಬೇರೆ ಜಿಲ್ಲೆಗಳಿಗೆ ಸ್ಥಳಾಂತರ ಮಾಡಲಾಗುತ್ತಿದೆ ಎಂಬ ವರದಿಗಳಿಗೆ ಸಂಬಂಧಿಸಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ‘ರಾಮನಗರ ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ವಿವಿಧ ಅಭಿವೃದ್ಧಿ ಯೋಜನೆಗಳನ್ನು 2018ರ ಅವಧಿಯಲ್ಲಿ ಮಂಜೂರು ಮಾಡಿದ್ದೆ. ಆದರೆ ನನ್ನ ಮೇಲಿನ ವೈಯಕ್ತಿಕ ದ್ವೇಷಕ್ಕಾಗಿ ರಾಮನಗರವೂ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಮಂಜೂರಾಗಿರುವ ಯೋಜನೆಗಳನ್ನು ತಡೆ ಹಿಡಿಯುವ ಮೂಲಕ ಜನರಿಗೆ ಅನ್ಯಾಯ ಮಾಡಬೇಡಿ’ ಎಂದು ಕೋರಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು