ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆ- ರೈತರ ಬದುಕಿಗೆ ಧಕ್ಕೆ: ಕುಮಾರಸ್ವಾಮಿ ಆತಂಕ

ಅಕ್ಷರ ಗಾತ್ರ

ಬೆಂಗಳೂರು: ‘ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರುವ ಕುರಿತು ಇಂದು ಸಚಿವ ಸಂಪುಟದಲ್ಲಿ‌ ನಿರ್ಧಾರವಾಗುತ್ತಿದೆ. ರೈತರ ಬದುಕನ್ನು ಅಭದ್ರಗೊಳಿಸುವ, ಬಹುರಾಷ್ಟ್ರೀಯ ಕಂಪನಿಗಳ ದಾಸ್ಯಕ್ಕೆ ಒಳಪಡಿಸುವ ಈ ಸುಗ್ರೀವಾಜ್ಞೆಗೆ ಸರ್ಕಾರ ಯಾವುದೇ ಕಾರಣಕ್ಕೂ ಮುಂದಾಗಬಾರದು. ಇದು ಕಡೇ ಎಚ್ಚರಿಕೆ. ಇಲ್ಲವಾದರೆ ಹೋರಾಟ ಎದುರಿಸಬೇಕು’ ಎಂದು ಜೆಡಿಎಸ್ ನಾಯಕ ಎಚ್‌.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

‘ಬಹುರಾಷ್ಟ್ರೀಯ ಕಂಪನಿಗಳಿಗೆ ನಮ್ಮನ್ನು ಒಪ್ಪಿಸಿಕೊಳ್ಳುವುದು ಅಪಾಯಕಾರಿ. ಅಭದ್ರತೆಯ ಈ ವ್ಯವಸ್ಥೆಗೆ ಕೃಷಿ ಮತ್ತು ರೈತರನ್ನು ಒಳಪಡಿಸುವುದು ನಮ್ಮ ಬೆನ್ನೆಲುಬನ್ನೇ ಮುರಿದಂತೆ. ₹ 20 ಲಕ್ಷ ಕೋಟಿ ಪ್ಯಾಕೇಜ್ ವೇಳೆ ‘ಲೊಕಲೈಸೇಶನ್’ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದರು. ಆದರೆ ಬಹುರಾಷ್ಟ್ರೀಯ ಕಂಪನಿಗಳಿಗೆ ರೈತರನ್ನು ಒಪ್ಪಿಸುವುದು ಯಾವ ಲೋಕಲೈಸೇಶನ್?’ ಎಂದು ಅವರು ಪ್ರಶ್ನಿಸಿದ್ದಾರೆ.

‘ರೈತ ತನ್ನ ಉತ್ಪನ್ನಗಳನ್ನು ಮಾರಾಟ ಮಾಡುವಾಗ ಒಂದು ವೇಳೆ ವಂಚನೆಗೊಳಗಾದರೆ ಎಪಿಎಂಸಿ ಮೂಲಕ ವ್ಯಾಜ್ಯ ಬಗೆಹರಿಸಿಕೊಳ್ಳಲು ಅವಕಾಶವಿದೆ. ಆದರೆ ಬಹುರಾಷ್ಟ್ರೀಯ ಕಂಪನಿಗಳು ಮಾಡುವ ವಂಚನೆಗಳ ವಿರುದ್ಧ ನಮ್ಮ ರೈತರು ಹೋರಾಡಬಲ್ಲರೇ? ಅವರ ಕೂಟ ವ್ಯವಸ್ಥೆಯ ಎದುರು ಸೆಣಸಬಲ್ಲರೇ? ಕೃಷಿ ವ್ಯವಸ್ಥೆಗೆ ಕಾಯಕಲ್ಪ ತರಬೇಕು. ಆದರೆ ದಾಸ್ಯಕ್ಕೊಳಪಡಿಸಬಾರದು’ ಎಂದು ಸಲಹೆ ಮಾಡಿದ್ದಾರೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT