ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆ. 17ರಿಂದ ಕುಂಭ ಮೇಳ

Last Updated 31 ಡಿಸೆಂಬರ್ 2018, 18:04 IST
ಅಕ್ಷರ ಗಾತ್ರ

ಮೈಸೂರು: ತಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆಬ್ರುವರಿ 17ರಿಂದ ಮೂರು ದಿನಗಳ ಕಾಲ ಕುಂಭ ಮೇಳ ನಡೆಯಲಿದೆ.

ಹನ್ನೊಂದನೇ ಕುಂಭ ಮೇಳದ ಸಿದ್ಧತೆ ಕುರಿತು ಮೈಸೂರಿನ ಸುತ್ತೂರು ಶಾಖಾ ಮಠದಲ್ಲಿ ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ನೇತೃತ್ವದಲ್ಲಿ ಸೋಮವಾರ ಪೂರ್ವಭಾವಿ ಸಭೆ ನಡೆಯಿತು.

ಸ್ವಾಮೀಜಿಗಳು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡರು. ಕುಂಭ ಮೇಳದ ಯಶಸ್ವಿಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

‘ಕುಂಭ ಮೇಳಕ್ಕೆ ಎಷ್ಟೇ ಹಣ ಖರ್ಚಾದರೂ ಪರವಾಗಿಲ್ಲ. ಸರ್ಕಾರದಲ್ಲಿ ಅನುದಾನಕ್ಕೆ ಕೊರತೆಯಿಲ್ಲ. ಮೂರು ದಿನ ಎಲ್ಲ ಕಾರ್ಯಕ್ರಮಗಳೂ ಅಚ್ಚುಕಟ್ಟಾಗಿ ನಡೆಯಬೇಕು. ಸರ್ಕಾರವೇ ಮುಂದೆ ನಿಂತು ಕುಂಭ ಮೇಳ ನಡೆಸಲಿದೆ’ ಎಂದು ಸಭೆಯ ಬಳಿಕ ಸಚಿವರು ತಿಳಿಸಿದರು.

‌ದಕ್ಷಿಣ ಭಾರತದ ಏಕೈಕ ಕುಂಭ ಮೇಳ ನಡೆಯುವ ಸ್ಥಳ ಎಂದೇ ಖ್ಯಾತಿ ಪಡೆದಿರುವ ತಿರುಮಕೂಡಲಿನ ತ್ರಿವೇಣಿ ಸಂಗಮದಲ್ಲಿ ಪ್ರತಿ ಮೂರು ವರ್ಷಗಳಿಗೊಮ್ಮೆ ಮೇಳ ಆಯೋಜಿಸಲಾಗುತ್ತದೆ. 10ನೇ ಕುಂಭ ಮೇಳ 2016ರ ಫೆಬ್ರುವರಿ ತಿಂಗಳಲ್ಲಿ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT