ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀರಾಮುಲು ಹೇಳಿಕೆ ವಿರುದ್ಧ ಆಯೋಗಕ್ಕೆ ದೂರು: ಡಿ.ಕೆ.ಶಿವಕುಮಾರ್‌

Last Updated 10 ಮೇ 2019, 8:17 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಪೌರಾಡಳಿತ ಸಚಿವರಾಗಿದ್ದ ಸಿ.ಎಸ್. ಶಿವಳ್ಳಿ ಅವರ ಸಾವಿಗೆ ಕಾಂಗ್ರೆಸ್ ಕಾರಣ ಎಂದಿರುವ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದೇವೆ ಎಂದು ಸಚಿವ ಡಿ.ಕೆ. ಶಿವಕುಮಾರ್‌ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶ್ರೀರಾಮುಲು ಕಾಂಗ್ರೆಸ್ ಪಕ್ಷದ ಮೇಲೆ ಕೊಲೆ ಆರೋಪ ಮಾಡಿದ್ದು ಅಕ್ಷಮ್ಯ. ಚುನಾವಣೆ ಸಂದರ್ಭದಲ್ಲಿ ಅಸಂಬದ್ಧ ಹೇಳಿಕೆ ನೀಡುವುದು ಸರಿಯಲ್ಲ. ಈ ಕುರಿತು ನಾವು ಈಗಾಗಲೇ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ. ಮುಂದಿನ ತೀರ್ಮಾನ ತಗೆದುಕೊಳ್ಳಲಿದೆ’ ಎಂದರು.

ಭ್ರಷ್ಟಾಚಾರ ಹಣದಿಂದ ಚುನಾವಣೆ ಮಾಡುತ್ತಿದ್ದಾರೆ ಎಂಬ ಯಡಿಯೂರಪ್ಪ ಆರೋಪಕ್ಕೆ ತಿರುಗೇಟು‌ ನೀಡಿದ ಡಿಕೆಶಿ, ಯಾರು ಭ್ರಷ್ಟಾಚಾರ ಮಾಡಿದ್ದಾರೆ ಎಂಬ ಬಗ್ಗೆ ದಾಖಲೆ ಇದ್ದರೆ ಬಿಡುಗಡೆ ಮಾಡಲಿ. ಚುನಾವಣಾ ಆಯೋಗ ಆ ನಿಟ್ಟಿನಲ್ಲಿ ತನಿಖೆ ನಡೆಸಲಿ. ಪ್ರತಿಪಕ್ಷದಲ್ಲಿ ಇದ್ದವರು ಆರೋಪ ಮಾಡುವುದು ಸಹಜ ಎಂದರು.

ಕುಂದಗೋಳ ಚುನಾವಣೆ ಬಡವರು ಹಾಗೂ ಶ್ರೀಮಂತರ ನಡುವಿನ ಯುದ್ಧವಾಗಿದೆ. ಬಿಜೆಪಿ ಅಭ್ಯರ್ಥಿ ಚಿಕ್ಕನಗೌಡರ ಕಳೆದ ಚುನಾವಣೆಯಲ್ಲಿ ತಮಗೆ ಕಡಿಮೆ ಮತ ಬಿದ್ದ ಪ್ರದೇಶಗಳಿಗೆ ನೀರು ಬಿಡದೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಒತ್ತಾಯಪೂರ್ವಕವಾಗಿ ಹೆದರಿಸಿದ ಬೆದರಿಸಿ ವೋಟ್ ಕೇಳುತ್ತಿದ್ದಾರೆ. ನಾವು ನೀತಿ‌ಸಂಹಿತೆ ಉಲ್ಲಂಘಿಸದೆ ತಾಳ್ಮೆಯಿಂದ ಮತಯಾಚನೆ ಮಾಡುತ್ತಿದ್ದೇವೆ. ನಾವು ಎಲ್ಲರ ಬಳಿ ಕೈ ಮುಗಿದು ಮತ ಕೇಳುತ್ತಿದ್ದೇವೆ. ಯಡಿಯೂರಪ್ಪ ಅವರ ವೋಟ್ ಇದೇ ಕ್ಷೇತ್ರದಲ್ಲಿ ಇದ್ದರೆ ಅವರಲ್ಲೂ ಮತ ಯಾಚಿಸುತ್ತಿದ್ದೇವು ಎಂದರು.

ಶ್ರೀರಾಮುಲು ಹೇಳಿಕೆ ಖಂಡನೀಯ: ಸಂತೋಷ ಲಾಡ್
ಹುಬ್ಬಳ್ಳಿ:
ಮಾಜಿ ಸಚಿವ ಶ್ರೀರಾಮುಲು ಅವರು ಸಿ.ಎಸ್. ಶಿವಳ್ಳಿ ಅವರ ಸಾವಿಗೆ ಕಾಂಗ್ರೆಸ್ ಕಾರಣ ಎಂದು ಹೇಳಿಕೆ ನೀಡಿದ್ದು ಅಕ್ಷಮ್ಯ ಅಪರಾಧ ಎಂದು ಮಾಜಿ ಸಚಿವ ಸಂತೋಷ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಶ್ರೀರಾಮುಲು ಅವರು ಯಾಕೆ ಆ ಹೇಳಿಕೆ ನೀಡಿದ್ದಾರೆ ಎಂದು ಗೊತ್ತಿಲ್ಲ. ರಾಜಕೀಯದಲ್ಲಿ ಇಂತಹ ಹೇಳಿಕೆ ಸಮಂಜಸವಲ್ಲ. ಶ್ರೀರಾಮುಲು ಅಣ್ಣ ನಾನು ಒಳ್ಳೆಯ ಸ್ನೇಹಿತರಾಗಿದ್ದು, ಅವರ ಹೇಳಿಕೆಗೆ ಉಪಚುನಾವಣೆಯ ಫಲಿತಾಂಶ ಸೂಕ್ತ ಉತ್ತರ ನೀಡಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT