ಕುಂದಗೋಳ ಉಪ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಮತದಾನ 

ಮಂಗಳವಾರ, ಜೂನ್ 18, 2019
29 °C

ಕುಂದಗೋಳ ಉಪ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಮತದಾನ 

Published:
Updated:

ಹುಬ್ಬಳ್ಳಿ: ಆಡಳಿತ ಮತ್ತು ವಿರೋಧ ಪಕ್ಷಕ್ಕೆ ಪ್ರತಿಷ್ಠೆಯಾಗಿರುವ, ರಾಜ್ಯದ ಗಮನ ಸೆಳೆದಿರುವ ಕುಂದಗೋಳ ಉಪ ಚುನಾವಣೆ ಭಾನುವಾರ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಮತ ಚಲಾಯಿಸಿದ್ದಾರೆ. 

ಕ್ಷೇತ್ರದ ಯರಗುಪ್ಪಿಯಲ್ಲಿ ಅವರು ಹಕ್ಕು ಚಲಾಯಿಸಿದರು. ಬಳಿಕ ಪತಿ ಸಿ‌.ಎಸ್. ಶಿವಳ್ಳಿ ಅವರ ಸಮಾಧಿಗೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು.


ಮತದಾನ ಬಳಿಕ ಕುಸುಮಾವತಿ ಶಿವಳ್ಳಿ, ಪತಿ ಸಿ‌.ಎಸ್. ಶಿವಳ್ಳಿ ಅವರ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಕ್ಷೇತ್ರದಲ್ಲಿ 33 ಸೂಕ್ಷ್ಮ ಹಾಗೂ 38 ಅತಿಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದ್ದು, ಅರೆಸೇನಾ ಪಡೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಂಗವಿಕಲರು ತಮ್ಮ ಹಕ್ಕು ಚಲಾಯಿಸಲು ಗಾಲಿ ಕುರ್ಚಿ ಹಾಗೂ ಸಹಾಯಕರನ್ನು ನೇಮಕ ಮಾಡಲಾಗಿದೆ. 26 ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆಯನ್ನು ನೇರವಾಗಿ ವೀಕ್ಷಿಸಲು ಅನುಕೂಲವಾಗುವಂತೆ ವೆಬ್‌ಕಾಸ್ಟ್‌ ಮಾಡಲಾಗಿದೆ. 

ಬೆಳಿಗ್ಗೆ 11 ಗಂಟೆಯವರೆಗೆ 24.20%  ರಷ್ಟು ಮತದಾನವಾಗಿತ್ತು.‌ 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 4

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !