ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಖ್ಯಾತ ಕಳ್ಳ ಕುಣಿಗಲ್ ಗಿರಿ ಬಂಧನ 

Last Updated 16 ಜುಲೈ 2019, 5:18 IST
ಅಕ್ಷರ ಗಾತ್ರ

ಬೆಂಗಳೂರು: ತಲೆಮರೆಸಿಕೊಂಡು ಓಡಾಡುತ್ತಿರುವ ಕುಖ್ಯಾತ ಕಳ್ಳ ಕುಣಿಗಲ್ ಗಿರಿಯನ್ನು ಕೋರಮಂಗಲ ಪೊಲೀಸರು ಸೋಮವಾರ ತಡರಾತ್ರಿ ಬಂಧಿಸಿದ್ದಾರೆ.

ಕೋರಮಂಗಲದ ಪಬ್ ಒಂದರಲ್ಲಿ ಗಿರಿ ಮದ್ಯ ಸೇವಿಸುತ್ತಿರುವ ಮಾಹಿತಿ ಪಡೆದ ಪೊಲೀಸರು, ದಾಳಿ ನಡೆಸಿದ್ದರು.

ಹಲವು ಅಪರಾಧಗಳಲ್ಲಿ ಭಾಗಿಯಾಗಿರುವ ಗಿರಿ, ಇತ್ತೀಚೆಗಷ್ಟೇ ರೌಡಿ ಪರೇಡ್‌ಗೆ ಬಂದಿದ್ದ. ಅದಾದ ನಂತರ ಆತನನ್ನು ಕ್ರಿಕೆಟ್‌ ಬೆಟ್ಟಿಂಗ್ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಜಾಮೀನು ಮೇಲೆ ಹೊರಬಂದ ಆತ, ಕ್ರಿಕೆಟ್ ಬೆಟ್ಟಿಂಗ್ ದಂಧೆ ಮುಂದುವರಿಸಿದ್ದ. ಈ ಸಂಬಂಧ ಹಲವು ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಬಂಧನದ ಭೀತಿಯಲ್ಲಿ ಆತ ತಲೆಮರೆಸಿಕೊಂಡು ಓಡಾಡುತ್ತಿದ್ದ ಎಂದು ಪೊಲೀಸರು ತಿಳಿಸಿದರು..

ನಗರದ ರೆಸಿಡೆನ್ಸಿ ರಸ್ತೆಯಲ್ಲಿರುವ ಡಾನ್ಸ್‌ ಬಾರೊಂದರ ಮೇಲೆ ಜೂನ್ 16ರಂದು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದ ವೇಳೆ, ಅಲ್ಲಿದ್ದ ಫ್ರಿಡ್ಜ್‌ನಲ್ಲಿ ಅಡಗಿ ಗಿರಿ ಎಸ್ಕೇಪ್ ಆಗಿದ್ದ. ಅಂದು ರಾತ್ರಿ ಸ್ನೇಹಿತರು ಹಾಗೂ ಸಹಚರರಿಗಾಗಿ ಆ ಡಾನ್ಸ್‌ ಬಾರ್ ನಲ್ಲಿ ಪಾರ್ಟಿ ಏರ್ಪಡಿಸಿದ್ದ. ಪಾರ್ಟಿಯಲ್ಲಿ ನೃತ್ಯ ಮಾಡಲು 266 ಯುವತಿಯರನ್ನೂ ಕರೆಸಿದ್ದ. ಪಾರ್ಟಿ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಬಾರ್‌ ಮೇಲೆ ದಾಳಿ ಮಾಡಿದ್ದ ಸಿಸಿಬಿ ಅಧಿಕಾರಿಗಳು, ಯುವತಿಯರನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕಳುಹಿಸಿದ್ದರು.

ಪದೇ ಪದೇ ಪರಾರಿಯಾಗುತ್ತಿರುವ ಕುಣಿಗಲ್ ಗಿರಿಯನ್ನು ಬಂಧಿಸುವಂತೆ ಸಿಸಿಬಿ ಪೊಲೀಸರಿಗೆ ಅಲೋಕ್‌ಕುಮಾರ್ ಇತ್ತೀಚೆಗೆ ಖಡಕ್‌ ಸೂಚನೆ ನೀಡಿದ್ದರು. ‘ಅಪರಾಧ ಕೃತ್ಯ ಮುಂದುವರಿಸಿದರೆ ಪರಿಣಾಮ ನೆಟ್ಟಗಿರುವುದಿಲ್ಲ’ ಎಂದು ಕುಣಿಗಲ್ ಗಿರಿಗೆ ಅವರು ಇತ್ತೀಚೆಗೆ ಎಚ್ಚರಿಕೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT