ಸೋಮವಾರ, ಮೇ 23, 2022
30 °C

₹40 ಲಕ್ಷ ವೆಚ್ಚದಲ್ಲಿ ಕುಲಶಾಸ್ತ್ರೀಯ ಅಧ್ಯಯನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಕುರುಬ ಜನಾಂಗವನ್ನು ಪರಿಶಿಷ್ಟ ಪಂಗಡದ (ಎಸ್‌.ಟಿ) ಪಟ್ಟಿಗೆ ಸೇರಿಸಬಹುದೇ ಎನ್ನುವ ಕುರಿತು ಸ್ಪಷ್ಟ ಅಭಿಪ್ರಾಯ ತಿಳಿಯಲು ಕುಲ ಶಾಸ್ತ್ರೀಯ ಅಧ್ಯಯನ ನಡೆಸುವಂತೆ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ನಿರ್ದೇಶಕರಿಗೆ ರಾಜ್ಯ ಸರ್ಕಾರ ಸೂಚಿಸಿದೆ.

ಕಲಬುರ್ಗಿ, ಬೀದರ್‌, ಯಾದಗಿರಿ ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿರುವ ಕುರುಬ ಸಮಾಜದ ಜನರ ಆಚಾರ–ವಿಚಾರ, ಭಾಷೆ, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿ, ಭೌಗೋಳಿಕ ಅಂಶಗಳ ಕುರಿತಂತೆ ಅಂದಾಜು ₹ 40 ಲಕ್ಷ ವೆಚ್ಚದಲ್ಲಿ ಅಧ್ಯಯನ ಕೈಗೊಳ್ಳಲು ಸೂಚಿಸಲಾಗಿದೆ. ಆರು ತಿಂಗಳಲ್ಲಿ ಅಧ್ಯಯನ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು ಎಂದು ಆದೇಶದಲ್ಲಿ ಸಮಾಜ ಕಲ್ಯಾಣ ಇಲಾಖೆ ತಿಳಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು