ಟ್ರಾಲಿ ಮೈ ಮೇಲೆ ಬಿದ್ದು ಕಾರ್ಮಿಕ ಸಾವು

7

ಟ್ರಾಲಿ ಮೈ ಮೇಲೆ ಬಿದ್ದು ಕಾರ್ಮಿಕ ಸಾವು

Published:
Updated:

ಬೆಂಗಳೂರು: ನಾಯಂಡನಹಳ್ಳಿ ಬಳಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಸಿಮೆಂಟ್‌ ಸಾಗಣೆಯ ಟ್ರಾಲಿ ಮೈ ಮೇಲೆ ಬಿದ್ದು ಕಾರ್ಮಿಕ ಪ್ರಭು (42) ಎಂಬುವರು ಮೃತಪಟ್ಟಿದ್ದಾರೆ. 

ಸ್ಥಳೀಯ ನಿವಾಸಿ ಮೊಹಮ್ಮದ್ ಸುಹೇಲ್ ಎಂಬುವರಿಗೆ ಸೇರಿದ್ದ ಜಾಗದಲ್ಲಿ ನಿರ್ಮಿಸಲಾಗುತ್ತಿದ್ದ ಕಟ್ಟಡದಲ್ಲಿ ಈ ಅವಘಡ ಸಂಭವಿಸಿದೆ. ಸುಹೇಲ್, ಗುತ್ತಿಗೆದಾರರಾದ ಶಂಕರ್ ಹಾಗೂ ಚಕ್ರಪ್ಪ ಎಂಬುವರ ವಿರುದ್ಧ ನಿರ್ಲಕ್ಷ್ಯ ಆರೋಪದಡಿ ಚಂದ್ರಾಲೇಔಟ್ ಠಾಣೆ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಯಚೂರು ಜಿಲ್ಲೆಯ ಪ್ರಭು, ಉದ್ಯೋಗ ಅರಸಿ ಕುಟುಂಬ ಸಮೇತ ನಗರಕ್ಕೆ ಬಂದಿದ್ದರು. ಚಂದ್ರಾಲೇಔಟ್‌ನ 16ನೇ ಅಡ್ಡರಸ್ತೆಯಲ್ಲಿ ವಾಸವಿದ್ದರು.

‘ಕಟ್ಟಡದ ಮೂರನೇ ಮಹಡಿಯಲ್ಲಿ ಶನಿವಾರ ಕೆಲಸ ನಡೆಯುತ್ತಿತ್ತು. ನೆಲ ಮಹಡಿಯಿಂದ ಟ್ರಾಲಿ ಮೂಲಕ ಸಿಮೆಂಟ್‌ ಹಾಗೂ ಇಟ್ಟಿಗೆಗಳನ್ನು ಸಾಗಿಸಲಾಗುತ್ತಿತ್ತು. ಮಧ್ಯಾಹ್ನ 1 ಗಂಟೆ ಸುಮಾರಿಗೆ ಮೂರನೇ ಮಹಡಿಯಲ್ಲಿದ್ದ ಟ್ರಾಲಿ, ನೆಲಮಹಡಿಯಲ್ಲಿದ್ದ ಪ್ರೌಭು ಅವರ ಮೇಲೆ ಬಿದ್ದಿತ್ತು. ತೀವ್ರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು’ ಎಂದು ಹೇಳಿದರು.

‘ಅವರ ಮೇಲೆ ಟ್ರಾಲಿ ಹೇಗೆ ಬಿತ್ತು ಎಂಬುದು ಗೊತ್ತಾಗಿಲ್ಲ. ಸ್ಥಳದಲ್ಲಿದ್ದ ಕಾರ್ಮಿಕರನ್ನು ವಿಚಾರಣೆಗೆ ಒಳಪಡಿಸಿ ಮಾಹಿತಿ ಪಡೆಯುತ್ತಿದ್ದೇವೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !