ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತಗಟ್ಟೆಗಳಲ್ಲಿ ಅಗತ್ಯ ಕ್ರಮದ ಪರಿಶೀಲನೆ

ವಯೋವೃದ್ಧರು, ಅಂಗವಿಕಲರು ಸುಲಭವಾಗಿ ಒಳಹೋಗಲು ರ‍್ಯಾಂಪ್‌ ವ್ಯವಸ್ಥೆ
Last Updated 17 ಏಪ್ರಿಲ್ 2018, 10:40 IST
ಅಕ್ಷರ ಗಾತ್ರ

ಕನಕಪುರ: ಚುನಾವಣೆಯಲ್ಲಿ  ಶೇ100ರಷ್ಟು ಮತದಾನ ಆಗುವಂತೆ ಅಗತ್ಯ ಕ್ರಮಗಳನ್ನು ಚುನಾವಣಾ ಆಯೋಗ ಕೈಗೊಂಡಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಣಾಧಿಕಾರಿ ಟಿ.ಎಸ್‌.ಶಿವರಾಮ್‌ ತಿಳಿಸಿದರು.

ಕನಕಪುರ ವಿಧಾನಸಭಾ ವ್ಯಾಪ್ತಿಯ ಮತಗಟ್ಟೆ ಕೇಂದ್ರಗಳಲ್ಲಿ ವಯೋವೃದ್ಧರು, ಅಂಗವಿಕಲರು ಸುಲಭವಾಗಿ ಒಳಹೋಗಲು ರ‍್ಯಾಂಪ್‌ ವ್ಯವಸ್ಥೆ ಇರುವ ಬಗ್ಗೆ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಕ್ಷೇತ್ರದ ವ್ಯಾಪ್ತಿಯಲ್ಲಿ ಐದು ಸಹ ಮತಗಟ್ಟೆಗಳು ಸೇರಿದಂತೆ ಒಟ್ಟು 294 ಮತಗಟ್ಟೆಗಳಿವೆ. ಅವುಗಳಲ್ಲಿ ರ‍್ಯಾಂಪ್‌ ವ್ಯವಸ್ಥೆ, ಶೌಚಾಲಯ, ಕುಡಿಯುವ ನೀರು, ಗ್ರಾಮಗಳಿಗೆ ಸಂಪರ್ಕ ರಸ್ತೆ ಬಗ್ಗೆ ವರದಿ ನೀಡುವಂತೆ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗೆ ತಿಳಿಸಿದ್ದರು. ಅವರ ಆದೇಶದ ಅನ್ವಯ ಆಯಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತಗಟ್ಟೆಗಳಲ್ಲಿ ಆಗಬೇಕಾದ ಕೆಲಸಗಳನ್ನು ಮಾಡಿದ್ದಾರೆ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಪುಟ್ಟಸ್ವಾಮಿ ಅವರ ನೇತೃತ್ವದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್‌.ಎಸ್‌.ಯತಿಕುಮಾರ್‌, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ನಾಗರಾಜು ತಂಡ ಕ್ಷೇತ್ರದ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. 299 ಮತಗಟ್ಟೆಗಳಲ್ಲಿ 30 ಕಡೆ ರ‍್ಯಾಂಪ್‌ ವ್ಯವಸ್ಥೆ ಇಲ್ಲದಿರುವುದು ತಿಳಿದು ಬಂದಿದೆ ಎಂದರು.

ಅಂಗವಿಕಲರನ್ನು ಕರೆದುಕೊಂಡು ಹೋಗಲು ಗಾಲಿ ಕುರ್ಚಿ ಖರೀದಿಸಲಾಗಿದೆ. ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ದೃಷ್ಟಿದೋಷ ಇರುವಂತವರಿಗೆ ಮೊದಲ ಬಾರಿಗೆ ಬ್ರೈಲ್‌ ಲಿಪಿ ಮೂಲಕ ಅಭ್ಯರ್ಥಿಗಳ ಗುರುತು ಮಾಡಿ ಮತದಾನ ಮಾಡುವ ವ್ಯವಸ್ಥೆ ಕಲ್ಪಿಸಿರುವುದಾಗಿ ತಿಳಿಸಿದರು.

ಮತಕೇಂದ್ರಗಳಲ್ಲಿ ರ‍್ಯಾಂಪ್‌ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್‌ ಸಂಪರ್ಕ ಹಾಗೂ ಸಂರಕ್ಷಣಾತ್ಮಕವಾಗಿ ಇರುವಂತೆ ನೋಡಿಕೊಳ್ಳಲಾಗಿದೆ. ಅಗತ್ಯ ಕ್ರಮ ಕೈಗೊಂಡಿದ್ದು ಅದರ ವರದಿ ಜಿಲ್ಲಾಧಿಕಾರಿಗೆ ನೀಡಿರುವುದಾಗಿ ತಿಳಿಸಿದರು.

ಪರಿಶೀಲನೆ ತಂಡದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪುಟ್ಟಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್‌.ಎಸ್‌. ಯತಿಕುಮಾರ್‌, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ನಾಗರಾಜು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT