ಶುಕ್ರವಾರ, ಫೆಬ್ರವರಿ 28, 2020
19 °C

ಸರ್ಕಾರಿ ಪದವಿ ಕಾಲೇಜುಗಳಲ್ಲಿ ಉತ್ತೀರ್ಣರಾದ ಎಲ್ಲರಿಗೆ ಲ್ಯಾಪ್‌ಟಾಪ್‌?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರ್ಕಾರಿ ಪದವಿ ಕಾಲೇಜುಗಳಲ್ಲಿ ಉತ್ತೀರ್ಣರಾದ ಪದವಿ ತರಗತಿಗಳ ಎಲ್ಲ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್‌ ನೀಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು.

‘ಪ್ರಥಮ ಪದವಿ ತರಗತಿಗಳ 1 ಲಕ್ಷಕ್ಕಿಂತ ಅಧಿಕ ವಿದ್ಯಾರ್ಥಿಗಳಿಗೆ ಸಹ ಶೀಘ್ರ ಲ್ಯಾಪ್‌ಟಾಪ್‌ ನೀಡಲಾಗುವುದು. ಎರಡು ಮತ್ತು ಮೂರನೇ ವರ್ಷಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಎಲ್ಲಾ ವಿಷಯಗಳಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಸಹ ಲ್ಯಾಪ್‌ಟಾಪ್‌ ನೀಡುವ ಕುರಿತು ಇದೀಗ ಪರಿಶೀಲನೆ ನಡೆಯುತ್ತಿದೆ, ಈ ಬಗ್ಗೆ ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು, ಈಗಾಗಲೇ ನೀಡಿದ ಲ್ಯಾಪ್‌ಟಾಪ್‌ ಹಿಂದಕ್ಕೆ ಪಡೆಯುವುದಿಲ್ಲ’ ಎಂದು ಅವರು ಬುಧವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ವೈದ್ಯಕೀಯ ಸೀಟು ಶುಲ್ಕ ನಿಗದಿಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ ಶಿಫಾರಸು ಮಾಡಲು ನ್ಯಾಯಮೂರ್ತಿ
ಯೊಬ್ಬರನ್ನು ನೇಮಕ ಮಾಡುವ ನಿಟ್ಟಿನಲ್ಲಿ ಹೈಕೋರ್ಟ್‌ ರಿಜಿಸ್ಟ್ರಾರ್‌ ಅವರಿಗೆ ಈಗಾಗಲೇ 4 ಬಾರಿ ಪತ್ರ ಬರೆಯಲಾಗಿದೆ ಎಂದರು.

ದುಡ್ಡು ಠೇವಣಿಗೆ ಟೆಂಡರ್‌: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಬಳಿ ₹300 ಕೋಟಿ ಸಂಗ್ರಹ ಠೇವಣಿ ಇದ್ದು, ಈ ವರ್ಷದಿಂದ ಟೆಂಡರ್‌ ಕರೆದು ಅದನ್ನು ಬ್ಯಾಂಕ್‌ನಲ್ಲಿ ಇರಿಸಲಾಗುತ್ತದೆ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು