ಕೋಲಾರ: ಪೌರತ್ವ (ತಿದ್ದುಪಡಿ) ಕಾಯ್ದೆ ಬೆಂಬಲಿಸಿ ಶನಿವಾರ ಅಲ್ಪಸಂಖ್ಯಾತ ಸಮುದಾಯದವರು ಹೆಚ್ಚಾಗಿರುವ ಕ್ಲಾಕ್ ಟವರ್ ಮಾರ್ಗವಾಗಿ ಮೆರವಣಿಗೆ ನಡೆಸಲು ಮುಂದಾದ ಬಿಜೆಪಿ ಕಾರ್ಯ
ಕರ್ತರು ಹಾಗೂ ಭಾರತೀಯ ಹಿತರಕ್ಷಣಾ ವೇದಿಕೆ ಸದಸ್ಯರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಬಿಜೆಪಿ, ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಹಿಂದೂಪರ ಸಂಘಟನೆಗಳನ್ನು ಒಳಗೊಂಡ ಭಾರತೀಯ ಹಿತರಕ್ಷಣಾ ವೇದಿಕೆಯು ನಗರದ ಎಂ.ಜಿ ರಸ್ತೆಯ ಚಂಪಕ್ ವೃತ್ತದಲ್ಲಿ ಸಿಎಎ ಬೆಂಬಲಿಸಿ ವೇದಿಕೆ ಕಾರ್ಯಕ್ರಮಕ್ಕೆ ಪೂರ್ವಾನುಮತಿ ಪಡೆದಿತ್ತು. ಆದರೆ ಮೆರವಣಿಗೆಗೆ ಪೊಲೀಸ್ ಇಲಾಖೆಯು ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಅನುಮತಿ ನಿರಾಕರಿಸಿತ್ತು.

ಆದರೆ, ಪ್ರವಾಸಿ ಮಂದಿರದ ಬಳಿ ಜಮಾಯಿಸಿದ ವೇದಿಕೆ ಸದಸ್ಯರು ಕ್ಲಾಕ್ ಟವರ್ ಮಾರ್ಗವಾಗಿ ಮೆರವಣಿಗೆ ನಡೆಸಲು ಮುಂದಾದರು. ಪೊಲೀಸರು ಮೆರವಣಿಗೆಗೆ ತಡೆಯೊಡ್ಡಿದ್ದರಿಂದ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ಬ್ಯಾರಿಕೇಡ್ಗಳನ್ನು ತಳ್ಳಿ ಮುನ್ನುಗ್ಗಲು ಯತ್ನಿಸಿದರು.

ಪರಿಸ್ಥಿತಿ ಕೈಮೀರುತ್ತಿರುವುದನ್ನು ಮನಗಂಡ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಈ ವೇಳೆ ಕಾರ್ಯಕರ್ತರು ದಿಕ್ಕಾಪಾಲಾಗಿ ಓಡಿದ್ದರಿಂದ ನೂಕುನುಗ್ಗಲು ಉಂಟಾಗಿ, ಮೂವರು ಪೊಲೀಸರೂ ಗಾಯಗೊಂಡರು.

ಮುಸ್ಲಿಂ ಸಮುದಾಯದವರು ಬಿಜೆಪಿಯ ಜನಾಂದೋಲನಕ್ಕೆ ಪ್ರತಿಯಾಗಿ ಕ್ಲಾಕ್ ಟವರ್ನಿಂದ ಪ್ರವಾಸಿ ಮಂದಿರದವರೆಗೆ ಮೆರವಣಿಗೆ ನಡೆಸಲು ಮುಂದಾದರು.

ಕಪಾಳಮೋಕ್ಷ!

ಲಾಠಿ ಪ್ರಹಾರದ ವೇಳೆ ಪ್ರವಾಸಿ ಮಂದಿರದಲ್ಲಿದ್ದ ಸಚಿವರಾದ ಆರ್.ಅಶೋಕ್, ಎಚ್.ನಾಗೇಶ್ ಹಾಗೂ ಸಂಸದ ಎಸ್.ಮುನಿಸ್ವಾಮಿ ಘಟನಾ ಸ್ಥಳಕ್ಕೆ ಬರಲಿಲ್ಲ. ಇದರಿಂದ ಅಸಮಾಧಾನಗೊಂಡ ಪಕ್ಷದ ಕಾರ್ಯಕರ್ತರು ವೇದಿಕೆ ಕಾರ್ಯಕ್ರಮದಲ್ಲಿ ಸಚಿವರು ಮತ್ತು ಸಂಸದರ ವಿರುದ್ಧ ಧಿಕ್ಕಾರ ಕೂಗಿ
ದರು. ಮನವೊಲಿಕೆಗೆ ಮುಂದಾದ ಅಶೋಕ್ ಮತ್ತು ಮುನಿಸ್ವಾಮಿ ಅವರನ್ನು ಕಾರ್ಯಕರ್ತರು ತೀವ್ರ ತರಾಟೆಗೆ ತೆಗೆದುಕೊಂಡರು. ತಾಳ್ಮೆ ಕಳೆದುಕೊಂಡ ಮುನಿಸ್ವಾಮಿ ಕಾರ್ಯಕರ್ತನಿಗೆ ಕಪಾಳ ಮೋಕ್ಷ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.