ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನೂನು ವಿ.ವಿ ಕುಲಸಚಿವ ರಾಜೀನಾಮೆ

Last Updated 29 ಸೆಪ್ಟೆಂಬರ್ 2019, 19:33 IST
ಅಕ್ಷರ ಗಾತ್ರ

ಬೆಂಗಳೂರು: ಕುಲಪತಿ ಪ್ರೊ.ಸುಧೀರ್ ಕೃಷ್ಣಸ್ವಾಮಿ ಅವರು ಅಧಿಕಾರ ಸ್ವೀಕರಿಸುವುದನ್ನು ತಡೆದು, ವಿಳಂಬ ಮಾಡಿದರು ಎಂಬ ಆರೋಪ ಎದುರಿಸುತ್ತಿರುವ ನ್ಯಾಷನಲ್ ಲಾ ಸ್ಕೂಲ್ ಇಂಡಿಯಾ ಯೂನಿವರ್ಸಿಟಿ ಕುಲಸಚಿವ ಪ್ರೊ.ಒ.ವಿ.ನಂದಿಮಠ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ಮಂಡಳಿಗೆ ಶನಿವಾರ ರಾಜೀನಾಮೆ ಸಲ್ಲಿಸಿರುವ ಬಗ್ಗೆ ವಿದ್ಯಾರ್ಥಿಗಳಿಗೆ ವಾಟ್ಸ್ಆಪ್‌ ಸಂದೇಶ ಕಳುಹಿಸಿದ್ದಾರೆ.

ಕುಲಪತಿ ನೇಮಕ ಪ್ರಕ್ರಿಯೆ ಏಕೆ ವಿಳಂಬವಾಯಿತು ಎಂದು ತಿಳಿಸುವ ಸಲುವಾಗಿ ಅವರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರನ್ನು ಭೇಟಿ ಮಾಡುತ್ತಾರೆ ಎಂದು ಹೇಳಲಾಗಿತ್ತು. ಆದರೆ ಅವರು ಭೇಟಿ ಮಾಡದೆ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದಾರೆ. ಪ್ರೊ.ನಂದಿಮಠ ಅವರು ಏಳು ವರ್ಷಗಳಿಂದ ಕುಲಸಚಿವರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT