ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಸಿಎಂ ಲಕ್ಷ್ಮಣ ಸವದಿ ವಿರುದ್ಧ ವರಿಷ್ಠರಿಗೆ ಪತ್ರ ಬರೆಯುವೆ : ರೇಣುಕಾಚಾರ್ಯ

Last Updated 28 ಅಕ್ಟೋಬರ್ 2019, 1:32 IST
ಅಕ್ಷರ ಗಾತ್ರ

ದಾವಣಗೆರೆ: ಉಪ ಚುನಾವಣೆಗೆ ಅನರ್ಹ ಶಾಸಕರಿಗೆ ಟಿಕೆಟ್ ನೀಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಹೇಳಿಕೆಯನ್ನು ಖಂಡಿಸಿರುವ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಈ ಕುರಿತು ಪಕ್ಷದ ವರಿಷ್ಠರು ಹಾಗೂ ಮುಖ್ಯಮಂತ್ರಿಗೆ ಪತ್ರ ಬರೆಯುವುದಾಗಿ ತಿಳಿಸಿದರು.

ದಾವಣಗೆರೆಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, ಇಂತಹ ಹೇಳಿಕೆಗಳು ಪಕ್ಷಕ್ಕೆ ಧಕ್ಕೆ ತರುತ್ತವೆ. ಪಕ್ಷದ ವರಿಷ್ಠರು, ಮುಖ್ಯಮಂತ್ರಿ ಹಾಗೂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರು ನಿರ್ಧರಿಸುತ್ತಾರೆಯೇ ಹೊರತು ರೇಣುಕಾಚಾರ್ಯ, ಲಕ್ಷ್ಮಣ ಸವದಿಯಲ್ಲ. ಎಂದು ಹೇಳಿದರು.

ಉಪ ಮುಖ್ಯಮಂತ್ರಿ ಆದವರು ಜವಾಬ್ದಾರಿಯುತ ಹೇಳಿಕೆ ನೀಡಬೇಕೇ ಹೊರತು, ಹುಚ್ಚು ಹೇಳಿಕೆ ನೀಡಬಾರದು ಎಂದು ಸಲಹೆ ನೀಡಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT