ಶುಕ್ರವಾರ, ಜುಲೈ 30, 2021
20 °C

ಪರಿಷತ್ ಚುನಾವಣೆ| ವಿಶ್ವನಾಥ್‌ಗಿಲ್ಲ ಅವಕಾಶ: ಎಂಟಿಬಿ, ಶಂಕರ್‌ಗೆ ಬಿಜೆಪಿ ಟಿಕೆಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಜ್ಯ ವಿಧಾ‌ನ ಪರಿಷತ್‌ಗೆ ಇದೇ 29ರಂದು ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದು, ಮಾಜಿ ಸಚಿವರಾದ ಎಂಟಿಬಿ ನಾಗರಾಜ್ ಹಾಗೂ ಆರ್.ಶಂಕರ್ ಅವರಿಗೆ ಟಿಕೆಟ್ ನೀಡಿದೆ.

ಆದರೆ, ಜೆಡಿಎಸ್ ತೊರೆದು ಬಿಜೆಪಿ ಸೇರಿ ಹುಣಸೂರಿನಲ್ಲಿ ನಡೆದಿದ್ದ ಉಪ‌ಚುನಾವಣೆಯಲ್ಲಿ ಸೋತಿದ್ದ ಮಾಜಿ ಸಚಿವ ಎಚ್.ವಿಶ್ವನಾಥ್ ಅವರನ್ನು ಪರಿಷತ್ ಚುನಾವಣೆಗೆ ಪಕ್ಷ‌ ಪರಿಗಣಿಸಿಲ್ಲ. ಕಲಬುರ್ಗಿಯ ಸುನಿಲ್ ವಲ್ಯಾಪುರೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಾಪಸಿಂಹ ನಾಯಕ್ ಅವರು ಟಿಕೆಟ್ ಪಡೆದುಕೊಂಡಿರುವ ಇತರ ಅಭ್ಯರ್ಥಿಗಳಾಗಿದ್ದಾರೆ. ನಾಮ ಪತ್ರ ಸಲ್ಲಿಕೆಗೆ ಗುರುವಾರ ಕಡೆಯ ದಿನವಾಗಿದ್ದು, ಕೊನೆಯ ಹಂತದಲ್ಲಿ ಟಿಕೆಟ್ ಘೋಷಿಸಲಾಗಿದೆ.

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಎಂಟಿಬಿ ನಾಗರಾಜ್ ಉಪ ಚುನಾವಣೆಯಲ್ಲಿ ಸೋತಿದ್ದರೂ, ಪರಿಷತ್‌ಗೆ ಟಿಕೆಟ್ ನೀಡಲಾಗಿದೆ.
ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದ ಆರ್.ಶಂಕರ್‌ಗೂ ಟಿಕೆಟ್ ದೊರೆತಿದೆ.

ಚಿಂಚೋಳಿಯಿಂದ ಎರಡು ಬಾರಿ ವಿಧಾನಸಭೆ ಸದಸ್ಯರಾಗಿ, ಸಚಿವರಾಗಿದ್ದ ಸುನಿಲ್ ವಲ್ಯಾಪುರೆ ಅವರಿಗೆ ಪರಿಷತ್ ಪ್ರವೇಶಕ್ಕೆ ಅವಕಾಶ ದೊರೆತಿದೆ.

ಮಾಜಿ ಸಚಿವ ಚನ್ನಪಟ್ಟಣದ ಸಿ.ಪಿ ಯೋಗೇಶ್ವರ್‌ ಅವರೂ ವಿಧಾನಪರಿಷತ್‌ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು