ಭಾನುವಾರ, ಡಿಸೆಂಬರ್ 8, 2019
21 °C

ಕುರಿಹಟ್ಟಿ ಮೇಲೆ ಚಿರತೆ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ಕುರಿಹಟ್ಟಿಯೊಂದರ ಮೇಲೆ ದಾಳಿ ನಡೆಸಿರುವ ಚಿರತೆ, ಕುರಿಯನ್ನು ಕಚ್ಚಿ ಸಾಯಿಸಿರುವ ಘಟನೆ ತಾಲ್ಲೂಕಿನ ಗುಂಡ್ಲುವದ್ದಿಗೇರಿ ಗ್ರಾಮದಲ್ಲಿ ಭಾನುವಾರ ಬೆಳಗಿನ ಜಾವ ನಡೆದಿದೆ.

ಕುರಿಹಟ್ಟಿಯು ಗ್ರಾಮದ ನಿವಾಸಿ ಹರಿಜನ ಕೆಂಚಪ್ಪ ಎಂಬುವರಿಗೆ ಸೇರಿದ್ದಾಗಿದೆ.

ಅರಣ್ಯ ಪ್ರದೇಶದ ಅಂಚಿನಲ್ಲಿ ಈ ಗ್ರಾಮವಿದೆ. ಆಗಾಗ, ಚಿರತೆ ದಾಳಿ ಮಾಡುತ್ತಿದೆ ಎನ್ನಲಾಗುತ್ತಿದೆ. ಕೆಲ ದಿನಗಳಿಂದ ಚಿರತೆಯ ಉಪಟಳ ಹೆಚ್ಚಾಗಿದ್ದು ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಅರಣ್ಯ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕುರಿಗಾಹಿಗಳು ಒತ್ತಾಯಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು