ಈಶ್ವರಪ್ಪಗೆ ಬೆದರಿಕೆ ಕರೆ: ದೂರು

ಶನಿವಾರ, ಏಪ್ರಿಲ್ 20, 2019
24 °C

ಈಶ್ವರಪ್ಪಗೆ ಬೆದರಿಕೆ ಕರೆ: ದೂರು

Published:
Updated:
Prajavani

ಶಿವಮೊಗ್ಗ: ಅನಾಮಧೇಯ ವ್ಯಕ್ತಿಯಿಂದ ಜೀವ ಬೆದರಿಕೆ ಕರೆ ಬಂದಿದೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಭಾನುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದರು.

‘‘ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಬಾಗಲಕೋಟೆಯಿಂದ ಚುನಾವಣೆ ಪ್ರಚಾರ ಮುಗಿಸಿ ರೈಲಿನ ಮೂಲಕ ಶಿವಮೊಗ್ಗಕ್ಕೆ ಬರುತ್ತಿದ್ದಾಗ ಶುಕ್ರವಾರ ಸಂಜೆ 5.30ರ ಹೊತ್ತಿಗೆ ಅನಾಮಧೇಯ ವ್ಯಕ್ತಿಯಿಂದ ಕರೆ ಬಂದಿದೆ. ಉರ್ದು ಮಿಶ್ರಿತ ಭಾಷೆಯಲ್ಲಿ ನನ್ನೊಂದಿಗೆ ಏಕವಚನದಲ್ಲಿ ಮಾತನಾಡಿದ್ದಾರೆ. ‘ನೀನು ಬಿಜೆಪಿಯಿಂದ ಮುಸ್ಲಿಮರಿಗೆ ಏಕೆ ಎಂ.ಪಿ. ಟಿಕೆಟ್ ಕೊಡುವುದಿಲ್ಲ’ ಎಂದು ಕೇಳಿ, ನನಗೆ ಜೀವ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಪದೇ ಪದೇ ‘ಜೀವ ತೆಗೆಯುತ್ತೇನೆ’ ಎಂದು ಹೇಳಿದ್ದಾರೆ’’ ಎಂದು ಆರೋಪಿಸಿದರು.

‘ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ನನಗೆ ಭದ್ರತೆ ನೀಡಬೇಕು’ ಎಂದು ಒತ್ತಾಯಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !