ಶನಿವಾರ, ಜುಲೈ 31, 2021
25 °C

ಚಂಪಾ, ಎಚ್‌ಎಸ್‌ಆರ್‌ಗೆ ಕರ್ನಾಟಕ ಸಂಘದ ಜೀವಮಾನ ಸಾಧನೆ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಇಲ್ಲಿನ ಕರ್ನಾಟಕ ಸಂಘವು 2020ನೇ ಸಾಲಿನ ನಾಡಿನ ಇಬ್ಬರು ಹಿರಿಯರಿಗೆ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಪ್ರಕಟಿಸಿದೆ.

ಕಾವ್ಯ ಕ್ಷೇತ್ರದಲ್ಲಿ ಡಾ. ಚಂದ್ರಶೇಖರ ಪಾಟೀಲ ಅವರಿಗೆ ‘ಡಾ.ದ.ರಾ. ಬೇಂದ್ರೆ’ ಪ್ರಶಸ್ತಿ ಮತ್ತು ವಿಮರ್ಶಾ ಕ್ಷೇತ್ರದಲ್ಲಿ  ಡಾ.ಎಚ್.ಎಸ್. ರಾಘವೇಂದ್ರರಾವ್ ಅವರಿಗೆ ‘ಪ್ರೊ.ತೀ.ನಂ. ಶ್ರೀಕಂಠಯ್ಯ’ ವಿಮರ್ಶಾ ಪ್ರಶಸ್ತಿಯನ್ನು ಘೋಷಿಸಿದೆ.

ಈ ಪ್ರಶಸ್ತಿಯು ತಲಾ ₹ 25 ಸಾವಿರ ನಗದು ಹಾಗೂ ಪ್ರಶಸ್ತಿಪತ್ರ ಒಳಗೊಂಡಿದೆ. ಪ್ರಶಸ್ತಿ ಪ್ರದಾನದ ದಿನಾಂಕವನ್ನು ಸದ್ಯದಲ್ಲಿಯೇ ಪ್ರಕಟಿಸಲಾಗುವುದು ಎಂದು ಕರ್ನಾಟಕ ಸಂಘದ ಗೌರವ ಕಾರ್ಯದರ್ಶಿ ಡಾ.ಎಚ್.ಎಸ್. ನಾಗಭೂಷಣ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು