ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೀಪ ಬೆಳಗಿಸಿದ ಬಿಎಸ್‌ವೈ: ಕೋವಿಡ್-19 ವಿರುದ್ಧದ ಹೋರಾಟಕ್ಕೆ ಒಗ್ಗಟ್ಟು ಪ್ರದರ್ಶನ

Last Updated 5 ಏಪ್ರಿಲ್ 2020, 16:20 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಕರೆ ನೀಡಿದಂತೆ, 9 ಗಂಟೆಗೆ ಸರಿಯಾಗಿ 9 ನಿಮಿಷಕ್ಕೆ ಮನೆಯ ಬಾಲ್ಕನಿಯಲ್ಲಿ ದೀಪ ಬೆಳಗಿ, ಕೋವಿಡ್- 19 ವಿರುದ್ಧದ ಹೋರಾಟದಲ್ಲಿ ನಮ್ಮ ಒಗ್ಗಟ್ಟು, ಇಚ್ಛಾಶಕ್ತಿಯನ್ನು ಪ್ರದರ್ಶಿಸಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ತಮ್ಮ ಕಾವೇರಿ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕೋವಿಡ್ 19 ಸೋಂಕು ನಿಯಂತ್ರಣಕ್ಕೆ ಕೇಂದ್ರ, ರಾಜ್ಯ ಸರ್ಕಾರಗಳು ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಆದರೆ ಇದು ಯಶಸ್ವಿಯಾಗುವುದು ಜನರ ಸಹಕಾರದಿಂದ ಮಾತ್ರ. ಆದ್ದರಿಂದ ಮತ್ತೊಮ್ಮೆ ನಾಡಿನ ಜನತೆಗೆ ಮನವಿ ಮಾಡುತ್ತೇನೆ. ನಾವು ಲಾಕ್‍ಡೌನ್ ಸಂದರ್ಭದಲ್ಲಿ ಅನಗತ್ಯ ಓಡಾಟ ನಿಲ್ಲಿಸೋಣ ಎಂದರು.

ಎಲ್ಲ ಸಂದರ್ಭಗಳಲ್ಲಿಯೂ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳೋಣ. ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ಮುನ್ನೆಚ್ಚರಿಕೆ ಕ್ರಮ ಪಾಲಿಸಿ, ಕೊರೊನಾ ವೈರಸ್ ಹರಡದಂತೆ ಎಚ್ಚರಿಕೆ ವಹಿಸೋಣ. ಆ ಮೂಲಕ ನಮ್ಮ ಆರೋಗ್ಯ ಹಾಗೂ ಇತರರ ಆರೋಗ್ಯ ಕಾಪಾಡುವ ಸಾಮಾಜಿಕ ಜವಾಬ್ದಾರಿಯನ್ನು ನಿಭಾಯಿಸುವ ಸಂಕಲ್ಪ ನಮ್ಮೆಲ್ಲರದಾಗಲಿ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT