ಮಂಗಳವಾರ, ಸೆಪ್ಟೆಂಬರ್ 21, 2021
26 °C

​​​​​​​ರೋಣ: ಮುಸ್ಲಿಂ ಯುವಕನಿಗೆ ಲಿಂಗದೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ರೋಣ: ತಾಲ್ಲೂಕಿನ ಅಸೂಟಿ ಗ್ರಾಮದ ಮುಸ್ಲಿಂ ಧರ್ಮದ ಯುವ ದಿವಾನ್ ಶರೀಫ್ ರವರಿಗೆ ಅದೇ ಗ್ರಾಮದ ಖಜೂರಿ ಶ್ರೀಮಠದ ಮುರುಘರಾಜೇಂದ್ರ ಕೋರಣೇಶ್ವರ ಶ್ರೀಗಳೂ ಲಿಂಗದೀಕ್ಷೆ ನೀಡಿದ್ದಾರೆ.

ಈಗಾಗಲೇ ದಿವಾನ್ ಶರೀಫ್ ಅವರಿಗೆ ಲಿಂಗಧೀಕ್ಷೆ ನೀಡಿದ್ದು, ಮುಂದಿನ ದಿನಗಳಲ್ಲಿ ಅಸೂಟಿ ಗ್ರಾಮದ ಖಜೂರಿ ಶ್ರೀಮಠ ಹಾಗೂ ಶಾಂತಿಧಾಮಕ್ಕೆ ಮುಸ್ಲಿಂ ಯುವ ದಿವಾನ್ ಶರೀಫರನ್ನು ಪೀಠಾಪತಿ ಮಾಡುವ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ನಮ್ಮದು ಬಸವ ತತ್ವ, ನಮ್ಮಲ್ಲಿ ಎಲ್ಲ ಧರ್ಮದವರಿಗೂ ಮುಕ್ತ ಅವಕಾಶವಿದೆ. 12ನೇ ಶತಮಾನದಲ್ಲಿ ಬಸವೇಶ್ವರರು ಹಾಕಿ ಕೊಟ್ಟಿರುವ ಸನ್ಮಾರ್ಗದಲ್ಲಿ ಸಾಗುತ್ತಾ ಬಂದಿದ್ದು, ಶರೀಫ್‍ ನಮ್ಮ ಅಸೂಟಿ ಶ್ರೀಮಠದ ಪೀಠಾಪತಿ ಆಗುತ್ತಿರುವುದು ಅದಕ್ಕೆ ಸಾಕ್ಷಿಯಾಗಿದೆ‘ ಎಂದು ಖಜೂರಿಮಠದ ಮುರುಘರಾಜೇಂದ್ರ ಕೋರಣೇಶ್ವರ ಶ್ರೀಗಳು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು