ಲಿಂಗಾಯತಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ಇಲ್ಲ: ಕೇಂದ್ರ

7

ಲಿಂಗಾಯತಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ಇಲ್ಲ: ಕೇಂದ್ರ

Published:
Updated:

ನವದೆಹಲಿ: ಲಿಂಗಾಯತ, ವೀರಶೈವ ಲಿಂಗಾಯತರಿಗೆ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಸಂಬಂಧ ಕರ್ನಾಟಕ ಸರ್ಕಾರ ಮಾಡಿದ್ದ ಶಿಫಾರಸನ್ನು ತಿರಸ್ಕರಿಸಿರುವುದಾಗಿ ಕೇಂದ್ರ ಸರ್ಕಾರ ಬುಧವಾರ ಲೋಕಸಭೆಯಲ್ಲಿ ತಿಳಿಸಿತು. 

ಕೇಂದ್ರದ ಅಲ್ಪಸಂಖ್ಯಾತ ಖಾತೆ ಸಚಿವ ಮುಖ್ತಾರ್‌ ಅಬ್ಬಾಸ್‌ ನಖ್ವಿ ಸದಸ್ಯರೊಬ್ಬರ ಲಿಖಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಅಲ್ಪಸಂಖ್ಯಾತ ಸ್ಥಾನ ಮಾನ ನೀಡುವ ಯಾವುದೇ ಸಮುದಾಯಗಳ ಪಟ್ಟಿ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದರು. 

ಲಿಂಗಾಯತ ಮತ್ತು ವೀರಶೈವ ಸಮುದಾಯದವರು ಬಸವತತ್ವದಲ್ಲಿ ನಂಬಿಕೆ ಇಟ್ಟು ಪಾಲನೆ ಮಾಡುತ್ತಿದ್ದಾರೆ ಈ ಸಮುದಾಯಕ್ಕೆ ರಾಷ್ಟ್ರೀಯ ಅಲ್ಪಸಂಖ್ಯಾತ ಕಾಯ್ದೆಯ (1992) ಅನ್ವಯ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ನೀಡುವಂತೆ ಕರ್ನಾಟಕ ಸರ್ಕಾರ ಕಳೆದ ಮಾರ್ಚ್‌ನಲ್ಲಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. 

ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗವು ಕರ್ನಾಟಕ ಸರ್ಕಾರದ ಶಿಫಾರಸು ಕುರಿತಂತೆ ಚರ್ಚಿಸಿ ಮತ್ತು ಅಳವಾಗಿ ಅಧ್ಯಯನ ನಡೆಸಿ, ಅಲ್ಪಸಂಖ್ಯಾತ ಸ್ಥಾನಮಾನ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮಾಡಿದ್ದ ಮನವಿಯನ್ನು ತಿರಸ್ಕರಿಸಲಾಗಿದೆ ಎಂದು ಅವರು ಸದನಕ್ಕೆ ಮಾಹಿತಿ ನೀಡಿದರು. 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !