ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ, ಯು ಕೆ.ಜಿ ಪ್ರಾರಂಭಕ್ಕೆ ಚಿಂತನೆ: ಕುಮಾರಸ್ವಾಮಿ

Last Updated 21 ಫೆಬ್ರುವರಿ 2019, 9:23 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ ಮತ್ತುಯು ಕೆ.ಜಿ ಪ್ರಾರಂಭಕ್ಕೆ ಚಿಂತನೆ ನಡೆಸಲಾಗುತ್ತಿದೆ' ಎಂದು‌ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಮಹಾರಾಣಿ ಕಲಾ,ವಾಣಿಜ್ಯ, ನಿರ್ವಹಣಾ ಕಾಲೇಜು ನಗರದಲ್ಲಿ‌ ಗುರುವಾರ ಆಯೋಜಿಸಿದ್ದ ರಾಷ್ಟ್ರೀಯ ವಿಚಾರ ಸಂಕಿರಣಉದ್ಘಾಟಿಸಿ ಅವರು ಮಾತನಾಡಿದರು.

'ಮುಂದಿನ ಶೈಕ್ಷಣಿಕ ವರ್ಷದಿಂದ 1000 ಶಾಲಾ-ಕಾಲೇಜುಗಳಲ್ಲಿ ಕನ್ನಡ ಮತ್ತು ಇಂಗ್ಲಿಷ ಮಾಧ್ಯಮದ ಆಯ್ಕೆಯನ್ನು ಪಾಲಕರಿಗೆ ಬಿಡಲಾಗುವುದು' ಎಂದು ಹೇಳಿದರು.

'ಈಗಾಗಲೇ ಖಾಸಗಿ ಶಾಲೆಗಳು ಬರುವ ಏ.15ರಿಂದಲೇ ಶಾಲೆಗಳು ಆರಂಭಿಸಲು ನಿರ್ಧರಿಸಿವೆ‌ ಆದರೆ, ಸರ್ಕಾರಿ ಶಾಲೆಗಳಲ್ಲಿ ಮೇ ಯಿಂದ ಶಾಲೆಗಳನ್ನು ಆರಂಭಿಸುವ ನಿರ್ಧಾರದ ಬಗ್ಗೆ ಸಾಕಷ್ಟು ಗೊಂದಲಗಳಿವೆ. ಈ ಬಗ್ಗೆ ಚರ್ಚಿಸಿ ತಿರ್ಮಾನಿಸಲಾಗುವುದು ' ಎಂದರು.

'ಶುಲ್ಕ ರಹಿತ ಶಿಕ್ಷಣ ವ್ಯವಸ್ಥೆ ಜಾರಿಗೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು' ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT