ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ: ಶೀಘ್ರ ನಿರ್ಣಯ: ಶಶಿಕಲಾ ಜೊಲ್ಲೆ

Last Updated 25 ಡಿಸೆಂಬರ್ 2019, 13:02 IST
ಅಕ್ಷರ ಗಾತ್ರ

ಕಲಬುರ್ಗಿ: ‘ಅಂಗನವಾಡಿಗಳಲ್ಲಿಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸುವ ಬಗ್ಗೆ ಬೇಡಿಕೆಯಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶಕುಮಾರ್‌ ಅವರೊಂದಿಗೆ ಸಭೆ ನಡೆಸಿ ಶೀಘ್ರ ನಿರ್ಣಯ ಕೈಗೊಳ್ಳಲಾಗುವುದು’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಅಂಗನವಾಡಿಗಳಲ್ಲೇ ಆರಂಭಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಗಳು ಒತ್ತಾಯಿಸುತ್ತಿವೆ. ಆದರೆ, ಇತ್ತೀಚೆಗೆ ಆಯ್ದ ಶಾಲೆಗಳಲ್ಲಿ ಆ ತರಗತಿಗಳು ಈಗಾಗಲೇ ಆರಂಭಗೊಂಡಿವೆ. ಹಿಂದೆ ಅಂಗನವಾಡಿಗಳಲ್ಲಿ ತರಗತಿಗಳನ್ನು ನಡೆಸಲು ಮುಂದಾದಾಗ ಶಿಕ್ಷಣ ಇಲಾಖೆ ಅಧಿಕಾರಿಗಳು ತಮ್ಮ ಶಾಲೆಗಳಲ್ಲಿ ಮಕ್ಕಳ ಕೊರತೆ ಉಂಟಾಗುವುದೆಂದು ಆತಂಕ ವ್ಯಕ್ತಪಡಿಸಿದ್ದರು. ಆದ್ದರಿಂದ ಪ್ರಸ್ತಾವಕ್ಕೆ ತಡೆ ನೀಡಲಾಗಿತ್ತು’ ಎಂದು ಅವರು ಹೇಳಿದರು.

‘ಪಡಿತರ ವಿತರಣೆಯಲ್ಲಿ ತೊಗರಿಯನ್ನೂ ಸಹ ಸೇರಿಸಲಾಗುವುದು’ ಎಂದುಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವೆಯೂ ಆದ ಶಶಿಕಲಾ ಜೊಲ್ಲೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT