ಸ್ಥಳೀಯ ಸಂಸ್ಥೆ: ಕಾಯ್ದಿರಿಸಿದ ಆದೇಶ

7
ವೇಳಾಪಟ್ಟಿ ಪ್ರಕಟಣೆ ಮುಂದೂಡಲು ಸೂಚನೆ

ಸ್ಥಳೀಯ ಸಂಸ್ಥೆ: ಕಾಯ್ದಿರಿಸಿದ ಆದೇಶ

Published:
Updated:

ಬೆಂಗಳೂರು: ‘ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ವಿಂಗಡಣೆಗೆ ಸಂಬಂಧಿಸಿದಂತೆ ಇನ್ನೂ ಏಳು ಮಹಾನಗರ ಪಾಲಿಕೆಗಳ ಅಧಿಸೂಚನೆಯ ಅಂತಿಮ ಪಟ್ಟಿಯನ್ನು ರಾಜ್ಯ ಸರ್ಕಾರ ನಮಗೆ ಇನ್ನೂ ನೀಡಿಲ್ಲ’ ಎಂದು ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತಂತೆ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಈ ವೇಳೆ ಚುನಾವಣಾ ಆಯೋಗದ ಪರ ವಕೀಲ ಕೆ.ಎನ್‌.ಫಣೀಂದ್ರ ಅವರು, ‘108 ಸ್ಥಳೀಯ ಸಂಸ್ಥೆಗಳಿಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಇವುಗಳ ಚುನಾವಣೆ ದಿನಾಂಕ ಹತ್ತಿರದಲ್ಲಿದೆ. ಆದರೆಇವುಗಳ ಅಧ್ಯಕ್ಷ–ಉಪಾಧ್ಯಕ್ಷ ಮೀಸಲು ಪಟ್ಟಿ ಅಧಿಸೂಚನೆ ಇನ್ನೂ ನಮ್ಮ ಕೈಸೇರಿಲ್ಲ. ಆದ್ದರಿಂದ ಈ ಅರ್ಜಿ ವಿಲೇವಾರಿ ಮಾಡಬಾರದು’ ಎಂದು ಕೋರಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ವಿಚಾರಣೆಯನ್ನು ಇದೇ 13ಕ್ಕೆ ಮುಂದೂಡಿದೆ.

ಕಾಯ್ದಿರಿಸಿದ ಆದೇಶ: ‘ಶಿವಮೊಗ್ಗ ಪಾಲಿಕೆ ಮೀಸಲು ನಿಗದಿಯಲ್ಲಿ ರೋಸ್ಟರ್‌ ಪದ್ಧತಿ ಅನುಸರಿಸಿಲ್ಲ’ ಎಂಬ ಆಕ್ಷೇಪಣೆ ಕುರಿತಂತೆ ಸಲ್ಲಿಸಲಾಗಿರುವ ರಿಟ್‌ ಅರ್ಜಿ ವಿಚಾರಣೆಯನ್ನು ಶುಕ್ರವಾರ ಮುಕ್ತಾಯಗೊಳಿಸಿರುವ ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠ ಆದೇಶ ಕಾಯ್ದಿರಿಸಿದೆ.

ಈ ಕುರಿತಂತೆ ಶಿವಮೊಗ್ಗದ ಪಿ.ಉಮೇಶ್‌ ಈ ಅರ್ಜಿ ಸಲ್ಲಿಸಿದ್ದಾರೆ.

ಮೈಸೂರು ಮತ್ತು ತುಮಕೂರು ಪಾಲಿಕೆಗಳ ವಾರ್ಡ್ ಮರುವಿಂಗಡಣೆ ಪ್ರಶ್ನಿಸಿರುವ ಅರ್ಜಿಗಳ ವಿಚಾರಣೆ ಮುಕ್ತಾಯಗೊಂಡಿದ್ದು ಈ ಅರ್ಜಿಗಳ ಆದೇಶವನ್ನೂ ಇದೇ ನ್ಯಾಯಪೀಠ ಕಾಯ್ದಿರಿಸಿದೆ.

‘ಆದೇಶ ಪ್ರಕಟವಾಗುವತನಕ ಮೂರೂ ಪಾಲಿಕೆಗಳ ಚುನಾವಣಾ ವೇಳಾಪಟ್ಟಿ ಪ್ರಕಟಿಸಬಾರದು’ ಎಂದು ನ್ಯಾಯಪೀಠ ಆಯೋಗಕ್ಕೆ ಮೌಖಿಕ ಸೂಚನೆ ನೀಡಿದೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !