ಸ್ಥಳೀಯ ಸಂಸ್ಥೆ ಅಧ್ಯಕ್ಷ–ಉಪಾಧ್ಯಕ್ಷ ಮೀಸಲು: ಸೆ.3ರ ಪಟ್ಟಿ ಮುಂದುವರಿಕೆ

7

ಸ್ಥಳೀಯ ಸಂಸ್ಥೆ ಅಧ್ಯಕ್ಷ–ಉಪಾಧ್ಯಕ್ಷ ಮೀಸಲು: ಸೆ.3ರ ಪಟ್ಟಿ ಮುಂದುವರಿಕೆ

Published:
Updated:

ಬೆಂಗಳೂರು: ‘ರಾಜ್ಯದ ವಿವಿಧ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಸೆಪ್ಟೆಂಬರ್ 6 ರಂದು ಹೊರಡಿಸಿರುವ ಪರಿಷ್ಕೃತ ಮೀಸಲಾತಿ ಪಟ್ಟಿ ಹಿಂಪಡೆಯಲಾಗಿದ್ದು, ಸೆ.3ರಂದು ಹೊರಡಿಸಲಾಗಿರುವ ಮೀಸಲು ಪಟ್ಟಿಯನ್ನೇ ಮುಂದುವರಿಸಲಾಗುವುದು’ ಎಂದು ಅಡ್ವೊಕೇಟ್ ಜನರಲ್ ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

ರಾಜ್ಯ ಸರ್ಕಾರ ಹೊರಡಿಸಿದ ಪರಿಷ್ಕೃತ ಮೀಸಲು ಪಟ್ಟಿ ಪ್ರಶ್ನಿಸಿ ಕಡೂರಿನ ವಿಜಯ ಹಾಗೂ ನಾಗಮಂಗಲದ ರೂಪಾ ಸೇರಿದಂತೆ 15ಕ್ಕೂ ಹೆಚ್ಚು ಜನ ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು ನ್ಯಾಯಮೂರ್ತಿ ವಿನೀತ್ ಕೊಠಾರಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ, ‘ಸೆ.6ರ ಮೀಸಲು ಪ್ರಶ್ನಿಸಿದ ಅರ್ಜಿ ವಿಚಾರಣೆಯ ಮಾನ್ಯತೆ ಕಳೆದುಕೊಂಡಿದೆ’ ಎಂದು ಅಭಿಪ್ರಾಯಪಟ್ಟು ವಿಲೇವಾರಿ ಮಾಡಿತು‌.

ಪ್ರಕರಣವೇನು?: ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸರ್ಕಾರ 2018ರ ಸೆ.3ರಂದು ಮೀಸಲು ಪಟ್ಟಿ ಪ್ರಕಟಿಸಿತ್ತು. ಅದಾದ ಮೂರೇ ದಿನಗಳಲ್ಲಿ ಕೆಲವು ಕ್ಷೇತ್ರಗಳ ಮೀಸಲಾತಿಯನ್ನು ಪರಿಷ್ಕರಿಸಿತ್ತು. ಈ ಸಂಬಂಧ ಸೆ.6ರಂದು ಪರಿಷ್ಕೃತ ಅಧಿಸೂಚನೆ ಹೊರಡಿಸಿತ್ತು.

‘ಇದು ಕಾನೂನು ಬಾಹಿರ ಕ್ರಮ. ಇಂತಹ ಪರಿಷ್ಕೃತ ಆದೇಶ ಹೊರಡಿಸಲು ಸರ್ಕಾರಕ್ಕೆ ಅಧಿಕಾರ ಇಲ್ಲ‌. ಇದು ರಾಜಕೀಯ ದುರುದ್ದೇಶದಿಂದ ಕೂಡಿದೆ’ ಎಂದು ಅರ್ಜಿದಾರರು ದೂರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !