ಸ್ಥಳೀಯ ಸಂಸ್ಥೆ: ಮೀಸಲು ಪಟ್ಟಿ ಪರಿಶೀಲನೆಗೆ ಸಲಹೆ

7

ಸ್ಥಳೀಯ ಸಂಸ್ಥೆ: ಮೀಸಲು ಪಟ್ಟಿ ಪರಿಶೀಲನೆಗೆ ಸಲಹೆ

Published:
Updated:

ಬೆಂಗಳೂರು: ‘ರಾಜ್ಯದ ವಿವಿಧ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಸಂಬಂಧಿಸಿದಂತೆ ಕಳೆದ ತಿಂಗಳ  6ರಂದು ಹೊರಡಿಸಿರುವ ಪರಿಷ್ಕೃತ ಮೀಸಲಾತಿ ಪಟ್ಟಿ ಹಿಂಪಡೆಯಲು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಲಾಗಿದೆ’ ಎಂದು ಅಡ್ವೊಕೇಟ್ ಜನರಲ್ (ಎ.ಜಿ) ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

ಪರಿಷ್ಕೃತ ಮೀಸಲು ಪಟ್ಟಿ ಪ್ರಶ್ನಿಸಿ ಕಡೂರಿನ ವಿಜಯ ಹಾಗೂ ನಾಗಮಂಗಲದ ರೂಪಾ ಸೇರಿದಂತೆ 15ಕ್ಕೂ ಹೆಚ್ಚು ಜನರು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ವಿನೀತ್ ಕೊಠಾರಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಎ.ಜಿ ಉದಯ ಹೊಳ್ಳ ಅವರು ನ್ಯಾಯಪೀಠಕ್ಕೆ ಈ ವಿಷಯ ತಿಳಿಸಿದರು.

‘ಈ ಕುರಿತು ಸರ್ಕಾರ ಯಾವ ನಿರ್ಧಾರ ಕೈಗೊಳ್ಳುತ್ತದೆಯೋ ಕಾದು ನೊಡಬೇಕು. ಆದಾಗ್ಯೂ, ಸೆ.3ರಂದು ಹೊರಡಿಸಿರುವ ಮೀಸಲು ಪಟ್ಟಿಯಲ್ಲಿ ಯಾವುದೇ ತಕರಾರು ಇಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !