ಸ್ಥಳೀಯ ಸಂಸ್ಥೆ ಚುನಾವಣೆ ಮುಂದೂಡಿಕೆ

7

ಸ್ಥಳೀಯ ಸಂಸ್ಥೆ ಚುನಾವಣೆ ಮುಂದೂಡಿಕೆ

Published:
Updated:

ಬೆಂಗಳೂರು: ರಾಜ್ಯದ 105 ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಇದೇ 31ಕ್ಕೆ ಮುಂದೂಡಲಾಗಿದೆ.

ಆಗಸ್ಟ್‌ 29ರಂದು ಚುನಾವಣೆ ನಿಗದಿಯಾಗಿತ್ತು. ವಾಜಪೇಯಿ ನಿಧನದ ಕಾರಣದಿಂದ ಮುಂದೂಡಲಾಗಿದೆ.

ನಾಮಪತ್ರ ಸಲ್ಲಿಕೆ ಶನಿವಾರ ಕಡೆಯ ದಿನ. ಆದರೂ, ಮೂರು ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಹೆಣಗಾಡುತ್ತಿವೆ. ಆಗಸ್ಟ್‌ 14ರ ವರೆಗೆ 308 ಮಂದಿಯಷ್ಟೇ ನಾಮಪತ್ರ ಸಲ್ಲಿಸಿದ್ದರು. 2,574 ವಾರ್ಡ್‌ಗಳಿಗೆ ನಡೆಯುವ ಚುನಾವಣೆಯಲ್ಲಿ 36.03 ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ. ಪ್ರತಿ ವಾರ್ಡ್‌ನಿಂದ ಕನಿಷ್ಠ 3 ನಾಮಪತ್ರ ಸಲ್ಲಿಕೆಯಾದರೂ 8,000 ಮಂದಿ ಕಣದಲ್ಲಿರಬೇಕಿದೆ. ನಾಮಪತ್ರ ಹಿಂದಕ್ಕೆ ಪಡೆಯಲು ಆಗಸ್ಟ್ 23 ಕೊನೆಯ ದಿನ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !