ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಟ್ಟಣ ಪಂಚಾಯ್ತಿಗಳಲ್ಲಿ ಬಿಜೆಪಿ, ಪುರಸಭೆಗಳಲ್ಲಿ ಕಾಂಗ್ರೆಸ್‌ ಮೇಲುಗೈ

Last Updated 31 ಮೇ 2019, 11:13 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ 19 ಪಟ್ಟಣ ಪಂಚಾಯ್ತಿ, 30 ಪುರಸಭೆ ಹಾಗೂ 7 ನಗರಸಭೆಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಪಟ್ಟಣ ಪಂಚಾಯ್ತಿಯಲ್ಲಿ ಬಿಜೆಪಿ, ಪುರಸಭೆಗಳಲ್ಲಿ ಕಾಂಗ್ರೆಸ್‌ ಮೇಲುಗೈ ಸಾಧಿಸಿವೆ.

19 ಪಟ್ಟಣ ಪಂಚಾಯ್ತಿಯಲ್ಲಿ ಬಿಜೆಪಿ 8ರಲ್ಲಿ ಅಧಿಕಾರು ಹಿಡಿಯುವ ಮೂಲಕ ಪಾರಮ್ಯ ಮೆರೆದಿದೆ. ಕಾಂಗ್ರೆಸ್‌ 3 ಪಟ್ಟಣ ಪಂಚಾಯ್ತಿಗಳನ್ನು ಗೆದ್ದುಕೊಂಡಿದೆ. ಜೆಡಿಎಸ್‌ ಶೂನ್ಯ ಸಂಪಾದನೆ ಮಾಡಿದೆ. 8 ಪಟ್ಟಣ ಪಂಚಾಯ್ತಿಗಳಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ.

30 ಪುರಸಭೆಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಮೇಲುಗೈ ಸಾಧಿಸಿದ್ದು 12 ಪುರಸಭೆಗಳಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿದೆ. ಬಿಜೆಪಿ 6, ಜೆಡಿಎಸ್‌ 2 ಪುರಸಭೆಗಳಲ್ಲಿ ಅಧಿಕಾರ ಹಿಡಿಯಲು ಮಾತ್ರ ಸಾಧ್ಯವಾಗಿದೆ. 10 ಪುರಸಭೆಗಳಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.

7 ನಗರಸಭೆಗಳ ಪೈಕಿ 2 ನಗರ ಸಭೆಗಳಲ್ಲಿ ಕಾಂಗ್ರೆಸ್‌ ಅಧಿಕಾರ ಪಡೆದುಕೊಂಡಿದೆ. ಬಿಜೆಪಿ ಮತ್ತು ಜೆಡಿಎಸ್‌ 7 ನಗರಸಭೆಗಳಲ್ಲೂ ಅಧಿಕಾರ ಹಿಡಿಯುವಲ್ಲಿ ವಿಫಲವಾಗಿವೆ. 5 ನಗರ ಸಭೆಗಳಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT