ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊರ ರಾಜ್ಯಗಳಲ್ಲಿರುವವರಿಗೆ ವಿಶೇಷ ರೈಲಿನ ವ್ಯವಸ್ಥೆ ಕಲ್ಪಿಸಿ: ಕಾಂಗ್ರೆಸ್‌ ನಿಯೋಗ

ಕನ್ನಡಿಗರು, ಕಾರ್ಮಿಕರಿಗೆ ವಿಶೇಷ ರೈಲಿನ ವ್ಯವಸ್ಥೆ ಕಲ್ಪಿಸುವಂತೆ ಮುಖ್ಯ ಕಾರ್ಯರ್ಶಿಗೆ ಮನವಿ
Last Updated 4 ಮೇ 2020, 12:41 IST
ಅಕ್ಷರ ಗಾತ್ರ

ಬೆಂಗಳೂರು: ಹೊರ ರಾಜ್ಯಗಳಲ್ಲಿರುವ ಕನ್ನಡಿಗರು ಹಾಗೂ ಕಾರ್ಮಿಕರನ್ನು ರಾಜ್ಯಕ್ಕೆ ಕರೆದುಕೊಂಡು ಬರಲು ವಿಶೇಷ ರೈಲಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಮುಖ್ಯ ಕಾರ್ಯರ್ಶಿ ಟಿ.ಎಂ. ವಿಜಯಭಾಸ್ಕರ್‌ ಅವರನ್ನು ಕಾಂಗ್ರೆಸ್‌ ನಿಯೋಗ ಒತ್ತಾಯಿಸಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದ ನಿಯೋಗ ಸೋಮವಾರ ಬೆಳಿಗ್ಗೆ ವಿಜಯಭಾಸ್ಕರ್‌ ಅವರನ್ನು ಭೇಟಿ ಮಾಡಿ, ಸ್ವಗ್ರಾಮಗಳಿಗೆ ತೆರಳಲು ಕಾರ್ಮಿಕರ ಹರಸಾಹಸ ಪಡುತ್ತಿರುವ ವಿಷಯವನ್ನು ಗಮನಕ್ಕೆ ತಂದಿದೆ.

ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್, ‘ಹೊರ ರಾಜ್ಯದಲ್ಲಿರುವ ಕನ್ನಡಿಗರನ್ನು ರಾಜ್ಯಕ್ಕೆ ಕರೆತರುವಂತೆ ಮುಖ್ಯ ಕಾರ್ಯದರ್ಶಿ ಬಳಿ ಮನವಿ ಮಾಡಿದ್ದೇವೆ. ಅಲ್ಲದೆ, ಅಂತರ್ ಜಿಲ್ಲೆಗಳಲ್ಲಿ ಸಿಲುಕಿರುವ ಕಾರ್ಮಿಕರೂ ಅವರವರ ಊರಿಗೆ ಹೋಗಲು ವ್ಯವಸ್ಥೆ ಮಾಡುವಂತೆ ತಿಳಿಸಿದ್ದೇವೆ’ ಎಂದರು.

‘ನಮ್ಮ ಪಕ್ಷದ ಮನವಿಯನ್ನು ಒಪ್ಪಿ, ಕಾರ್ಮಿಕರು ತಮ್ಮ ತಮ್ಮ ಊರಿಗೆ ಮರಳಲು ಉಚಿತ ಬಸ್ ವ್ಯವಸ್ಥೆ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಗ್ಗೆ ನಮಗೆ ಅಪಾರ ಗೌರವವಿದೆ. ಅವರು ಸಮಯೋಚಿತ ನಿರ್ಧಾರ ತೆಗೆದುಕೊಂಡಿದ್ದಾರೆ’ ಎಂದೂ ಅವರು ಹೇಳಿದರು.

ಸಚಿವ ಸುರೇಶ್ ಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ‘ವಿರೋಧ ಪಕ್ಷವಾಗಿ ನಮ್ಮ ಕೆಲಸ ಮಾಡುತ್ತಿದ್ದೇವೆ. ಪ್ರತಿಭಟನೆ ಮಾಡುವಷ್ಟು ನಮಗೆ ಸ್ವಾತಂತ್ರ್ಯ ಇಲ್ಲವೇ. ವಿರೋಧ ಪಕ್ಷದವರ ಬಾಯಿ ಮುಚ್ಚಿಸುವ ಕೆಲಸ ಮಾಡಲು ನಾವು ಬಿಡಲ್ಲ’ ಎಂದರು.

ಕಾಂಗ್ರೆಸ್ ನಡೆಸಿದ ಪ್ರತಿಭಟನೆಯನ್ನು ಸಚಿವ ಸುರೇಶ್ ಕುಮಾರ್ ಅವರು ತಮ್ಮ ಫೇಸ್ ಬುಕ್‌ ಖಾತೆಯಲ್ಲಿ ಟೀಕಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT