ಬುಧವಾರ, ಸೆಪ್ಟೆಂಬರ್ 22, 2021
29 °C

ಲಾಕ್‌ಡೌನ್‌ 2.0: ಮೇ 3ರವರೆಗೂ ಮದ್ಯ, ತಂಬಾಕು, ಗುಟ್ಕಾ ಮಾರಾಟ ನಿಷೇಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಏಪ್ರಿಲ್‌ 15ರಿಂದ ಮದ್ಯ ಮಾರಾಟಕ್ಕೆ ಅವಕಾಶ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದವರಿಗೆ ನಿರಾಶೆಯಾಗಿದ್ದು ಮೇ 3ರವರೆಗೂ ಮಧ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ದೇಶದಲ್ಲಿ ಎರಡನೇ ಹಂತದ ಲಾಕ್‌ಡೌನ್‌ ವಿಸ್ತರಣೆಯಾಗಿದ್ದು ಮೇ 3ರವರೆಗೂ ಭಾರತ ಸಂಪೂರ್ಣ ಸ್ತಬ್ದವಾಗಲಿದೆ. ಬುಧವಾರ ಕೇಂದ್ರ ಸರ್ಕಾರ ಮಾರ್ಗಸೂಚಿಯನ್ನು ಹೊರಡಿಸಿದ್ದು ಮದ್ಯ ಮಾರಾಟವನ್ನು ನಿಷೇಧಿಸಿದೆ.

ಎಲ್ಲಾ ರೀತಿಯ ಮದ್ಯ ಮಾರಾಟಕ್ಕೆ ನಿಷೇಧ ಹಾಕಿರುವ ಕೇಂದ್ರ ಸರ್ಕಾರ ಬಾರ್, ಕ್ಲಬ್, ಪಬ್‌ಗಳನ್ನು ಕೂಡ ಮೇ 3ರವರೆಗೂ ತೆರೆಯುವಂತಿಲ್ಲ ಎಂದು ಮಾರ್ಗಸೂಚಿಯಲ್ಲಿ ಹೇಳಿದೆ.

ತಂಬಾಕು ಉತ್ಪನ್ನಗಳು, ಗುಟ್ಕಾ ಮಾರಾಟವನ್ನು ಕೂಡ ಸರ್ಕಾರ ನಿಷೇಧಿಸಿದೆ.

ಕೇಂದ್ರದ ಮಾರ್ಗಸೂಚಿಗಳು ಬಂದ ಮೇಲೆ ಮದ್ಯ ಮಾರಾಟಕ್ಕೆ ಅವಕಾಶ ನೀಡುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸುಳಿವು ನೀಡಿದ್ದರು. ಇದೀಗ ಕೇಂದ್ರ ಸರ್ಕಾರವೇ ಮಾರ್ಗಸೂಚಿಯಲ್ಲಿ ನಿಷೇಧ ಹೇರಿರುವುದರಿಂದ ರಾಜ್ಯ ಪಾಲನೆ ಮಾಡಬೇಕಾಗಿದೆ.

ಇದರಿಂದಾಗಿ ಮದ್ಯಪ್ರಿಯರಿಗೆ ನಿರಾಶೆಯಾಗಿದೆ. 
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು