ಗುರುವಾರ , ಜುಲೈ 16, 2020
22 °C
ಗಡಿ ಜಿಲ್ಲೆಗಳಲ್ಲಿ ಬಿಗಿ ಬಂದೋಬಸ್ತ್‌

ಮುಕ್ತ ಸಂಚಾರಕ್ಕೆ ಸಿಗದ ಅವಕಾಶ: ಅನ್ಯ ರಾಜ್ಯಗಳ ವಾಹನಗಳಿಗೆ ನಿರ್ಬಂಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಲಾಕ್‌ಡೌನ್‌ ತೆರವುಗೊಳಿಸುವ ಪ್ರಕ್ರಿಯೆ ಸೋಮವಾರ ದಿಂದ ಆರಂಭವಾಗಿದ್ದರೂ, ರಾಜ್ಯದ ಗಡಿ ಜಿಲ್ಲೆಗಳಲ್ಲಿ ಅಂತರ ರಾಜ್ಯ ವಾಹನಗಳ ಸಂಚಾರಕ್ಕೆ ಇನ್ನೂ ಮುಕ್ತ ಅವಕಾಶ ನೀಡಿಲ್ಲ. ‘ಸೇವಾ ಸಿಂಧು’ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಸಿದವರಿಗೆ ಮಂಗಳೂರು, ಮೈಸೂರು ಮೂಲಕ ರಾಜ್ಯ ಪ್ರವೇಶಿಸಲು ಒಮ್ಮೆ ಮಾತ್ರ ಅವಕಾಶ ನೀಡಲಾಗುತ್ತಿದೆ. 

ಕೇರಳ, ತಮಿಳುನಾಡು, ಆಂಧ್ರ ಹಾಗೂ ತೆಲಂಗಾಣದ ಗಡಿ ಜಿಲ್ಲೆಗಳಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಈ ಭಾಗದ ಜನರಿ ದ್ದರು. ಆದರೆ, ಯಾವ ರಾಜ್ಯವೂ ಅನುಮತಿ ನೀಡದಿರುವುದರಿಂದ ನಿರ್ಬಂಧ ಮುಂದುವರಿದಿದೆ. 

ಚಾಮರಾಜನಗರ ಜಿಲ್ಲೆಯಲ್ಲಿರುವ ನಾಲ್ಕು ಗಡಿಭಾಗದಲ್ಲೂ ವಾಹನ– ಜನ ಸಂಚಾರ ತಡೆಯಲಾಗುತ್ತಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು