ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿಯಲ್ಲಿ ಸ್ವಯಂ ಪ್ರೇರಿತ ಲಾಕ್‌ಡೌನ್‌

ಕೊರೊನಾ ಸೋಂಕು ನಿಯಂತ್ರಣಕ್ಕೆ ವರ್ತಕರಿಂದ ಕ್ರಮ
Last Updated 27 ಜೂನ್ 2020, 12:22 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಸ್ವಯಂ ಪ್ರೇರಿತ ಲಾಕ್‌ಡೌನ್‌ಗೆ ಜಿಲ್ಲಾ ಚೇಂಬರ್‌ ಆಫ್‌ ಕಾಮರ್ಸ್ ಕರೆ ನೀಡಿದ್ದು ಅದಕ್ಕೆ ಬೆಂಬಲ ವ್ಯಕ್ತವಾಗುತ್ತಿದೆ. ನಗರವೂ ಸೇರಿದಂತೆ ಹಲವು ಕಡೆ ಶನಿವಾರ ಬೆಳಿಗ್ಗೆ 6ರಿಂದ ಮಧ್ಯಾಹ್ನ 2ರ ತನಕ ಮಾತ್ರ ವ್ಯಾಪಾರ ವಹಿವಾಟು ನಡೆಸಿ ಬಳಿಕ ಅಂಗಡಿಗಳು ಬಾಗಿಲು ಮುಚ್ಚಿದವು.

ಶನಿವಾರ ಮುಂಜಾನೆಯಿಂದ ಮಡಿಕೇರಿ ನಗರ ಸೇರಿದಂತೆ ವಿವಿಧೆಡೆ ಎಂದಿನಂತೆ ಜನರು ನಗರಕ್ಕೆ ಆಗಮಿಸಿ ದೈನಂದಿನ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು. ಮಧ್ಯಾಹ್ನ ಎರಡು ಗಂಟೆ ನಂತರ ನಗರದ ಪ್ರಮುಖ ಬೀದಿಗಳಲ್ಲಿ ಶೇ 50ರಷ್ಟು ಅಂಗಡಿ ಮಳಿಗೆಗಳು ಮುಚ್ಚಿದವು. ನಂತರ, ನಿಧಾನವಾಗಿ 3 ಗಂಟೆಯಷ್ಟರಲ್ಲಿಯೇ ಶೇ 90ರಷ್ಟು ಮಾಲೀಕರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದು ಕಂಡುಬಂತು.

ಮಧ್ಯಾಹ್ನ 2 ಗಂಟೆ ನಂತರ ಮಡಿಕೇರಿ ನಗರದಲ್ಲಿ ಹೆಚ್ಚಿನ ಜನಸಂದಣಿ ಕಂಡು ಬರಲಿಲ್ಲ. ನಗರದ ಪ್ರಮುಖ ಬೀದಿಗಳಾದ ಬಸ್ ನಿಲ್ದಾಣ, ಇಂದಿರಾ ಗಾಂಧಿ ವೃತ್ತ, ತಿಮ್ಮಯ್ಯ ವೃತ್ತ, ಮಹದೇವಪೇಟೆ ರಸ್ತೆ ಬಿಕೋ ಎನ್ನುತ್ತಿದ್ದವು.ಬೆಳಿಗ್ಗೆಯೇ ನಗರಕ್ಕೆ ಆಗಮಿಸಿದ ಜನರು ಅಗತ್ಯ ಸಾಮಗ್ರಿಕೊಂಡು ಬೇಗನೇ ಮನೆ ಸೇರಿದ್ದರು. ನಂತರ ಮಡಿಕೇರಿ ನಗರ ಬಿಕೋ ಎನ್ನುತ್ತಿತ್ತು.

ಮೂರು ತಿಂಗಳಿನಿಂದ ಕೊರೊನಾ ಸೋಂಕಿನಿಂದ ನಷ್ಟ ಅನುಭವಿಸಿದ್ದೇವೆ. ಆದರೆ, ಕೊರೊನಾ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಜಿಲ್ಲೆಯಲ್ಲಿ ದಿನೇದಿನೇ ಸೋಂಕು ಹೆಚ್ಚಾಗುತ್ತಿದೆ. ಇದಕ್ಕೆ ಸರ್ಕಾರ ಕಡಿವಾಣ ಹಾಕಲು ಸಾಧ್ಯವಿಲ್ಲ. ನಮಗೆ ನಾವೇ ಕಡಿವಾಣ ಹಾಕಿಕೊಳ್ಳಬೇಕು. ಸಾರ್ವಜನಿಕರ ಹಿತ ದೃಷ್ಟಿಯಿಂದ ಅಂಗಡಿ ಮುಚ್ಚಲಾಗಿದೆ ಎಂದು ವ್ಯಾಪಾರಸ್ಥರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT