ಬೆಂಗಳೂರು: ಲಾಕ್ಡೌನ್ ಜಾರಿಯಾದ ಬಳಿಕ ರಾಜ್ಯದಲ್ಲಿ ಸ್ಥಗಿತಗೊಂಡಿದ್ದ ಮದ್ಯ ಮಾರಾಟ ಸೋಮವಾರ ಪುನರಾರಂಭವಾಗಿದ್ದು, ಒಂದೇ ದಿನ ಅಂದಾಜು 12 ಲಕ್ಷ ಲೀಟರ್ಗೂ ಹೆಚ್ಚು ಮಾರಾಟವಾಗಿದೆ.

ರಾಜ್ಯದಾದ್ಯಂತ ಬೆಳಿಗ್ಗೆ 9ರಿಂದ ಸಂಜೆ 7ರ ವರೆಗೆ ಮದ್ಯದಂಗಡಿಗಳು ತೆರೆದಿದ್ದವು. ಅಂದಾಜು 3.9 ಲಕ್ಷ ಲೀಟರ್ ಬಿಯರ್ ಮತ್ತು 8.5 ಲಕ್ಷ ಲೀಟರ್ ಭಾರತೀಯ ತಯಾರಿಕಾ ಮದ್ಯ ಮಾರಾಟವಾಗಿದೆ. ಇಂದು ಮಾರಾಟವಾದ ಮದ್ಯದ ಅಂದಾಜು ಮೌಲ್ಯ ₹ 45 ಕೋಟಿ ಆಗಿದೆ ಎಂದು ಅಬಕಾರಿ ಆಯುಕ್ತರ ಪ್ರಕಟಣೆ ತಿಳಿಸಿದೆ.

ಎಂಆರ್ಪಿ ದರದಲ್ಲೇ ಮದ್ಯ ಮಾರಾಟ ಮಾಡಲಾಗುತ್ತಿದೆ. ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲ ಮದ್ಯದಂಗಡಿಗಳಿಗೂ ಸೂಚಿಸಲಾಗಿದೆ. ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸರ್ ಬಳಸಲು ಸೂಚಿಸಲಾಗಿದೆ. ಎಂಆರ್ಪಿ ಉಲ್ಲಂಘಿಸಿ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದೂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಬಕಾರಿ ಆಯುಕ್ತರ ಪ್ರಕಟಣೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.