‘ಕೈ’ಗೆ ಬಿಜೆಪಿ ಅತೃಪ್ತರ ಬೆಂಬಲ: ಸಿ.ಎಂ. ಇಬ್ರಾಹಿಂ

ಬೆಂಗಳೂರು: ‘ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರಿಗೆ ಟಿಕೆಟ್ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಬಿಜೆಪಿ ನಾಯಕರು ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ. ಹರಿಪ್ರಸಾದ್ ಪರ ಕೆಲಸ ಮಾಡುತ್ತಿದ್ದಾರೆ’ ಎಂದು ವಿಧಾನಪರಿಷತ್ ಕಾಂಗ್ರೆಸ್ ಸದಸ್ಯ ಸಿ.ಎಂ. ಇಬ್ರಾಹಿಂ ಹೇಳಿದರು.
ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘ಮೋದಿ ಬಿಟ್ಟರೆ ಬಿಜೆಪಿಯವರಿಗೆ ಬೇರೆ ವಿಷಯಗಳೇ ಇಲ್ಲ. ಆದರೆ, ಮೋದಿಯ ಸರ್ವಾಧಿಕಾರಿ ಧೋರಣೆಯಿಂದ ಜನ ರೋಸಿ ಹೋಗಿದ್ದಾರೆ. ಅದಕ್ಕೆ ಈ ಚುನಾವಣೆಯಲ್ಲಿ ಜನ ತಕ್ಕ ಉತ್ತರ ನೀಡಲಿದ್ದಾರೆ’ ಎಂದರು.
‘ಬಿಜೆಪಿಯ ಚುನಾವಣಾ ಪ್ರಣಾಳಿಕೆಯಲ್ಲಿ ಕೋಮುವಾದಿ ವಿಚಾರಗಳಿವೆ. ಇದನ್ನು ಗಮನಿಸಿ ಚುನಾವಣಾ ಆಯೋಗ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕು’ ಎಂದೂ ಅವರು ಒತ್ತಾಯಿಸಿದರು.
‘ಅಲ್ಪಸಂಖ್ಯಾತರು ಕಾಂಗ್ರೆಸ್ ಬೆಂಬಲಕ್ಕೆ ನಿಂತಿದ್ದಾರೆ. ಮುಸ್ಲಿಂ ಸಮುದಾಯ ಒಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಕೆಲಸ ಮಾಡುತ್ತಿದೆ’ ಎಂದರು.
‘ಚಿತ್ರನಟರನ್ನು ನೋಡಲು ಮಂಡ್ಯದಲ್ಲಿ ಜನ ಸೇರುತ್ತಿದ್ದಾರೆ. ರಾಜಕೀಯದಲ್ಲಿ ಚಿತ್ರನಟರ ಒರಸೆಗಳು ನಡೆಯುವುದಿಲ್ಲ. ನಿಖಿಲ್ ಕುಮಾರಸ್ವಾಮಿಗೆ ದೇವೇಗೌಡರ ಮೊಮ್ಮಗ ಎಂಬ ಹಣೆಪಟ್ಟಿ ಇದೆ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.