ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖರ್ಗೆ ಗೆಲ್ಲದಿದ್ದರೆ ಅಹಿಂದ ಧ್ವನಿ ಕ್ಷೀಣ: ಜಯಮಾಲಾ

Last Updated 21 ಏಪ್ರಿಲ್ 2019, 20:15 IST
ಅಕ್ಷರ ಗಾತ್ರ

ಕಲಬುರ್ಗಿ: ‘ರಾಜ್ಯದಲ್ಲಿ ಅಹಿಂದ ವರ್ಗದ ಧ್ವನಿ ಅಡಗಿಸುವ ಹುನ್ನಾರ ವ್ಯವಸ್ಥಿತವಾಗಿ ನಡೆದಿದೆ. ಈ ಧ್ವನಿ ಗಟ್ಟಿಯಾಗಿ ನಿಲ್ಲಬೇಕಾದರೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮತ್ತೆ ಗೆಲ್ಲಿಸಬೇಕು’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ ಹೇಳಿದರು.

ನಗರದಲ್ಲಿ ಭಾನುವಾರ ಆಯೋಜಿಸಿದ್ದ ಈಡಿಗ ಸಮಾಜದ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ‘ಖರ್ಗೆ ಅವರನ್ನು ಗೆಲ್ಲಿಸುವುದು ಈ ಭಾಗದ ಜನರ ಗೌರವದ ಪ್ರತೀಕ. ಅವರನ್ನು ಗೆಲ್ಲಿಸಿದರೆ ಸಂವಿಧಾನ ಗೆಲ್ಲಿಸಿದ ಹಾಗೆ’ ಎಂದರು.

‘ಹಿಂದಿನ ಸಿದ್ದರಾಮಯ್ಯ ಸರ್ಕಾರ ಹಾಗೂ ಈಗಿನ ಮೈತ್ರಿ ಸರ್ಕಾರದಲ್ಲಿ ಈಡಿಗ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಸಮಾಜ ಕಲ್ಯಾಣಸಚಿವ ಪ್ರಿಯಾಂಕ್ ಖರ್ಗೆ ಅವರು ನಾರಾಯಣಗುರು ಭವನಕ್ಕೆ₹5 ಕೋಟಿ ಅನುದಾನ ಒದಗಿಸಿದ್ದಾರೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT