ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಹಣ, ಮದ್ಯ ವಶ: ಶಿವಮೊಗ್ಗದಲ್ಲೇ ಹೆಚ್ಚು

Last Updated 21 ಏಪ್ರಿಲ್ 2019, 20:12 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಅಕ್ರಮವಾಗಿ ಹಣ ಮತ್ತು ಮದ್ಯ ಸಾಗಿಸಿದ ಅತೀ ಹೆಚ್ಚು ಪ್ರಕರಣ ದಾಖಲಾಗಿದೆ.

ಈ ಜಿಲ್ಲೆಯಲ್ಲಿ ಈವರೆಗೆ ₹ 10.41 ಕೋಟಿ ಮೌಲ್ಯದ ವಸ್ತುಗಳನ್ನು ಚುನಾವಣಾ ಆಯೋಗ ವಶಕ್ಕೆ ಪಡೆದಿದೆ. ₹ 8.70 ಕೋಟಿ ನಗದು, ₹ 1.70 ಕೋಟಿ ಮೌಲ್ಯದ ಮದ್ಯ, ₹ 18,200 ಮೌಲ್ಯದ ಮಾದಕ ವಸ್ತು, ₹ 34,250 ಮೌಲ್ಯದ ಇತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್‌ಕುಮಾರ್ ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ಹಾವೇರಿ ಜಿಲ್ಲೆಯಲ್ಲಿ ಅತೀ ಕಡಿಮೆ ₹ 22.41 ಲಕ್ಷ ನಗದು ಸೇರಿ ₹ 31,73 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ರಾಜ್ಯದಲ್ಲಿ ಒಟ್ಟು ₹ 31.81 ಕೋಟಿ ನಗದು ಸೇರಿ ₹ 79.26 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.ಹಣ ಮತ್ತು ಮದ್ಯ ಯಾವ ಪಕ್ಷಕ್ಕೆ ಸೇರಿದ್ದು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ವಿವರಿಸಿದರು.

ಗಡಿಯಲ್ಲಿ ಮದ್ಯ ಮಾರಾಟ ನಿಷೇಧ
ಚುನಾವಣೆ ನಡೆಯುತ್ತಿರುವ ಜಿಲ್ಲೆಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ರಾಜ್ಯದ ಗಡಿಗೆ ಹೊಂದಿಕೊಂಡಿರುವ ಹೊರ ರಾಜ್ಯದಲ್ಲೂ 5 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಸಂಜೀವ್‌ಕುಮಾರ್ ತಿಳಿಸಿದರು.‌

ಈಗಾಗಲೇ ಚುನಾವಣೆ ಮುಗಿರುವ ಜಿಲ್ಲೆಗಳ ಪಕ್ಕದ ಜಿಲ್ಲೆಯಲ್ಲಿ ಚುನಾವಣೆ ನಡೆಯುತ್ತಿದ್ದರೆ ಗಡಿ ಭಾಗದ 5 ಕಿಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT