ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೆಲವರನ್ನು ಮುಟ್ಟಲು ಆಗುತ್ತಿಲ್ಲ’

Last Updated 8 ಮೇ 2019, 18:48 IST
ಅಕ್ಷರ ಗಾತ್ರ

ಮೈಸೂರು: ‘ಇಂದಿನ ದಿನಗಳಲ್ಲಿ, ಭ್ರಷ್ಟಾಚಾರವನ್ನು ಕಿತ್ತೊಗೆಯುವ ಕೆಲಸದಲ್ಲಿ ನಾವು ಲೋಪವನ್ನು ಕಾಣುತ್ತಿದ್ದೇವೆ’ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ಬುಧವಾರ ಇಲ್ಲಿ ಖೇದ ವ್ಯಕ್ತಪಡಿಸಿದರು.

ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಎಲ್ಲಿ ಯಾವ ರೀತಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬುದು ಗೊತ್ತಿದ್ದರೂ ಕ್ರಮ ಕೈಗೊಳ್ಳಲು ಆಗುತ್ತಿಲ್ಲ. ಯಾರನ್ನು ಮುಟ್ಟಬೇಕೋ ಅವರನ್ನು ಮುಟ್ಟಲು ಸಾಧ್ಯವಾಗುತ್ತಿಲ್ಲ. ಇದರಿಂದ ವ್ಯಥೆ ಉಂಟಾಗುತ್ತಿದೆ’ ಎಂದರು.

‘ಸರ್ಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳಲ್ಲಿ ಮಾತ್ರ ಕೆಲವು ಭ್ರಷ್ಟರು ಇದ್ದಾರೆ ಎಂದು ನಾವು ಅಂದುಕೊಂಡಿದ್ದೇವೆ. ಆದರೆ ಖಾಸಗಿ ಕ್ಷೇತ್ರದಲ್ಲೂ ಭ್ರಷ್ಟರು ಇದ್ದಾರೆ. ಚುನಾವಣೆ ಸಮಯದಲ್ಲಿ ಹಣ ಕೊಟ್ಟು ಮತಗಳನ್ನು ಪಡೆಯುವುದೂ ಭ್ರಷ್ಟಾಚಾರದ ಕೆಲಸ. ಅಂತಹ ಕೆಟ್ಟ ಪ್ರವೃತ್ತಿ ನಿಲ್ಲಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT