ಲೋಕಸಭೆ ಚುನಾವಣೆ; ‘ಕೈ’ ಸಭೆ

7

ಲೋಕಸಭೆ ಚುನಾವಣೆ; ‘ಕೈ’ ಸಭೆ

Published:
Updated:

ಬೆಂಗಳೂರು: ಲೋಕಸಭೆ ಚುನಾವಣೆ ತಯಾರಿ ಸಂಬಂಧ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ನೇತೃತ್ವದಲ್ಲಿ ಪಕ್ಷದ ಪ್ರಮುಖರ ಸಭೆ ಶುಕ್ರವಾರ ನಡೆಯಲಿದೆ.

ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಶಿವಮೊಗ್ಗ, ಮೈಸೂರು, ಮಂಡ್ಯ, ಬೆಂಗಳೂರು ಕೇಂದ್ರ ಮತ್ತು ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರಗಳ ಪ್ರಮುಖರ ಜೊತೆ ನಾಯಕರು ಪ್ರತ್ಯೇಕವಾಗಿ ಸಭೆ ನಡೆಸಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ, ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪಾಲ್ಗೊಳ್ಳುವರು.

ಲೋಕಸಭೆ ಕ್ಷೇತ್ರದ ಪರಿಸ್ಥಿತಿ, ವಿಧಾನಸಭೆ ಚುನಾವಣೆಯ ಸಾಧನೆ, ಲೋಪಗಳು, ಅಭ್ಯರ್ಥಿಯಾಗಲು ಆಕಾಂಕ್ಷೆ ಹೊಂದಿರುವವರು, ಜೆಡಿಎಸ್‌ ಜೊತೆ ಮೈತ್ರಿ... ಮತ್ತಿತರ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.

ಮೈತ್ರಿ ಮಾಡಿಕೊಂಡರೆ, ಜೆಡಿಎಸ್ ಗೆದ್ದಿರುವ ಹಾಸನ ಮತ್ತು ಮಂಡ್ಯ ಲೋಕಸಭೆ ಕ್ಷೇತ್ರಗಳನ್ನು ಬಿಟ್ಟುಕೊಡಬೇಕಾಗಬಹುದು. ಅಂತಹ ಸ್ಥಿತಿಯಲ್ಲಿ ಸ್ಥಳೀಯ ನಾಯಕರನ್ನು ಹೇಗೆ ಮನವೊಲಿಸಬೇಕೆಂಬ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !