ಶನಿವಾರ, ಫೆಬ್ರವರಿ 22, 2020
19 °C
ಮಧ್ವಾಚಾರ್ಯ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮ

ಗಡಿ ವಿವಾದ ಕೆದಕುವುದು ಸಲ್ಲ: ಸಿ.ಎನ್. ಅಶ್ವತ್ಥನಾರಾಯಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಮಹಾರಾಷ್ಟ್ರ- ಕರ್ನಾಟಕ ಗಡಿ ವಿಚಾರ ಮಹಾಜನ್‌ ವರದಿಯಲ್ಲೇ ಇತ್ಯರ್ಥ ಆಗಿದೆ. ಈ ವಿಚಾರವಾಗಿ ಜನರನ್ನು ಭಾವನಾತ್ಮಕವಾಗಿ ಪ್ರಚೋದಿಸುವುದು ಸರಿಯಲ್ಲ. ಶಿವಸೇನಾ ವಕ್ತಾರ ಸಂಜಯ್‌ ರಾವುತ್‌ ಮತ್ತೆ ಮತ್ತೆ ಗಡಿ ಕುರಿತು ತಗಾದೆ ತೆಗೆಯುವುದು ಬಿಟ್ಟು ಅಭಿವೃದ್ಧಿಯತ್ತ ಗಮನ ಕೊಡಲಿ’ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು. 

ಮಲ್ಲೇಶ್ವರದಲ್ಲಿ ಭಾನುವಾರ ಮಧ್ವಾಚಾರ್ಯರ ಪ್ರತಿಮೆ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಅವರು, ‘ಮಾನವೀಯತೆಗೆ, ಒಳ್ಳೆಯ ಕಾರ್ಯಗಳಿಗೆ ಗಡಿ ಇಲ್ಲ. ಕರ್ನಾಟಕ ಮತ್ತು ಮಹಾರಾಷ್ಟ್ರದ ಜನ ಸೌಹಾರ್ದದಿಂದ ಬಾಳುತ್ತಿದ್ದೇವೆ. ಅನಗತ್ಯ ವಿವಾದ ಎಳೆದು ತಂದು ಸಮಾಜದ ಶಾಂತಿ ಹಾಳು ಮಾಡಬಾರದು’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು