ಮಡಿಕೇರಿ: ‘ಜನಸಾಮಾನ್ಯರ ಮತ್ತು ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಕಾಂಗ್ರೆಸ್ ಬಲವರ್ಧನೆ ಆಗಬೇಕಾಗಿದ್ದು, ಮುಂಬರುವ ಮಡಿಕೇರಿ ನಗರಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ’ ಎಂದು ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

‘ಈ ಬಾರಿಯ ಮಡಿಕೇರಿ ನಗರಸಭಾ ಚುನಾವಣೆಯಲ್ಲಿ ಬಹುಮತದೊಂದಿಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ಕಾರ್ಯಕರ್ತರು ಈಗಿನಿಂದಲೇ ಕಾರ್ಯೋನ್ಮುಖವಾಗಬೇಕು. ಜನಪರ ಹೋರಾಟಗಳಲ್ಲಿ ಭಾಗಿಯಾಗಬೇಕು’ ಎಂದರು.

ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ ಮಾತನಾಡಿ, ಮುಂಬರುವ ನಗರಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದೇ ಬ್ಲಾಕ್ ಕಾಂಗ್ರೆಸ್‌ನ ಗುರಿಯಾಗಿದೆ’ ಎಂದು ತಿಳಿಸಿದರು.

ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಮಾತನಾಡಿ, ಪ್ರತಿ ಬೂತ್‌ಮಟ್ಟದಲ್ಲಿ ಸಭೆ ನಡೆಸುವ ಮೂಲಕ ಪಕ್ಷವನ್ನು ಬಲಗೊಳಿಸುವಂತೆ ಸಲಹೆ ನೀಡಿದರು.

ಜಿ.ಪಂ ಸದಸ್ಯೆ ಕೆ.ಪಿ.ಚಂದ್ರಕಲಾ ಮಾತನಾಡಿ, ಬೂತ್‌ಮಟ್ಟ ಮತ್ತು ವಲಯ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವ ಮೂಲಕ ಮುಂದಿನ ಗ್ರಾ.ಪಂ ಚುನಾವಣೆಗೆ ಸಜ್ಜಾಗುವಂತೆ ತಿಳಿಸಿದರು.

ಪಕ್ಷದ ಹಿರಿಯ ಮುಖಂಡ ಎಚ್.ಎಸ್.ಚಂದ್ರಮೌಳಿ ಮಾತನಾಡಿ, ಕೊಡಗು ಜಿಲ್ಲಾ ಕಾಂಗ್ರೆಸ್ ನಮಗೆಲ್ಲರಿಗೂ ಮನೆಯಂತಿದ್ದು, ಅದನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ಪಕ್ಷದ ಬಲವರ್ಧನೆಗೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.ಕೆಪಿಸಿಸಿ ಸದಸ್ಯ ಟಿ.ಪಿ.ರಮೇಶ್, ಜಿಲ್ಲಾ ಕಾಂಗ್ರೆಸ್ ಖಜಾಂಚಿ ಎಚ್.ಎಂ.ನಂದಕುಮಾರ್ ಮಾತನಾಡಿದರು.

ಎಸ್.ಸಿ., ಎಸ್.ಟಿ ಮತ್ತು ಓಬಿಸಿ ವರ್ಗಗಳ ಮೀಸಲಾತಿ ಮೂಲಭೂತ ಹಕ್ಕಲ್ಲ ಎಂಬ ತೀರ್ಪಿಗೆ ಕೇಂದ್ರ ಸರ್ಕಾರ ಕಾರಣವಾಗಿದೆ ಎಂದು ಆರೋಪಿಸಿದ ಸಭೆ ಖಂಡನಾ ನಿರ್ಣಯ ಕೈಗೊಂಡಿತು.

ಪುಲಿಯಂಡ ಜಗದೀಶ್, ಪ್ರಕಾಶ್ ಆಚಾರ್ಯ, ಪ್ರಭು ರೈ, ಟಿ.ಪಿ.ನಾಣಯ್ಯ, ಸುನೀಲ್ ನಂಜಪ್ಪ, ಎಂ.ಇ.ಹನೀಫ್, ಜಗದೀಶ್, ಉದಯ ಕುಮಾರ್, ಕೆ.ಎಂ.ವೆಂಕಟೇಶ್, ಮೋಹನ್‌ದಾಸ್, ಜಿಲ್ಲಾ ಕಾಂಗ್ರೆಸ್ ವಕ್ತಾರ ಟಾಟು ಮೊಣ್ಣಪ್ಪ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಎಂ.ಎ.ಉಸ್ಮಾನ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ತೆನ್ನಿರ ಮೈನಾ, ಡಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ಸೋನಿಯ ಬ್ರಿಗೇಡ್‌ನ ಜಿಲ್ಲಾ ಅಧ್ಯಕ್ಷ ಜಾನ್ಸನ್, ವೃತ್ತಿಪರ ಘಟಕದ ಅಧ್ಯಕ್ಷ ಅಂಬೆಕಲ್ ನವೀನ್ ಕುಶಾಲಪ್ಪ, ಡಿಸಿಸಿ ಪ್ರಮುಖರಾದ ಟಿ.ಪಿ.ರಾಜೇಂದ್ರ, ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್, ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಸದಾಮುದ್ದಪ್ಪ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ರಾಹುಲ್ ಮಾರ್ಷಲ್, ಎಸ್‌ಸಿ ಘಟಕದ ಅಧ್ಯಕ್ಷ ಮುದ್ದುರಾಜ್, ನಗರ ಹಿಂದುಳಿದ ವರ್ಗದ ಅಧ್ಯಕ್ಷ ಜಿ.ಸಿ.ಜಗದೀಶ್, ರಾಹುಲ್ ಬ್ರಿಗೇಡ್‌ನ ಅಧ್ಯಕ್ಷ ಯತೀಶ್ ಕುಮಾರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.