ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೇಣುಕಾ ಯಲ್ಲಮ್ಮದೇವಿ ಜಾತ್ರಾ ಮಹೋತ್ಸವ

Last Updated 19 ಫೆಬ್ರುವರಿ 2019, 19:43 IST
ಅಕ್ಷರ ಗಾತ್ರ

ಮಾಗಡಿ: ಸೋಲೂರಿನ ಆರ್ಯ ಈಡಿಗ ಮಹಾಸಂಸ್ಥಾನ ನಾರಾಯಣ ಗುರು ಮಠದ ಆವರಣದಲ್ಲಿ ರೇಣುಕಾ ಯಲ್ಲಮ್ಮದೇವಿ ಜಾತ್ರಾ ಮಹೋತ್ಸವ ಮಂಗಳವಾರ ವೈಭವದಿಂದ ನಡೆಯಿತು.

ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘ ಮತ್ತು ರೇಣುಕಾ ಯಲ್ಲಮ್ಮದೇವಿ ದೇವಸ್ಥಾನ ಟ್ರಸ್ಟ್‌ ಸಹಯೋಗದಲ್ಲಿ ಭರತ ಹುಣ್ಣಿಮೆ ಅಂಗವಾಗಿ ಜಾತ್ರಾ ಮಹೋತ್ಸವ ಆಯೋಜಿಸಲಾಗಿತ್ತು. ಪ್ರಧಾನ ಅರ್ಚಕ ಗೋಪಿ ಜೀಯರ್‌ ವೃಂದ ಪೂಜಾ ವಿಧಾನಗಳನ್ನು ನಡೆಸಿಕೊಟ್ಟರು.

ರಾಜ್ಯ ಆರ್ಯ ಈಡಿಗರ ಸಂಘದ ಅಧ್ಯಕ್ಷ ತಿಮ್ಮೇಗೌಡ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು. ಧರ್ಮ ಯಾವುದೇ ಇರಲಿ; ಮನುಷ್ಯ ಉತ್ತಮ ವ್ಯಕ್ತಿಯಾಗಿ ಬಾಳ್ವೆ ನಡೆಸಬೇಕು ಎಂದು ಹೇಳಿದ್ದ ಬ್ರಹ್ಮಶ್ರೀ ನಾರಾಯಣ ಗುರು ಅವರ ಆದರ್ಶದ ನಡೆ ಎಲ್ಲರೂ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.

ಹಿರಿಯರಾದ ಓಬಯ್ಯ, ಆರ್ಯ ಈಡಿಗ ಮಹಿಳಾ ಸಮಾಜದ ಅಧ್ಯಕ್ಷೆ ನಳಿನಾಕ್ಷಿ ಸಣ್ಣಪ್ಪ, ಉಪಾಧ್ಯಕ್ಷ ಉದಯ್‌ ಮುಖಂಡರಾದ ಅಗಲಕೋಟೆ ರಾಮಯ್ಯ ಮಾತನಾಡಿ, ಆರ್ಯ ಈಡಿಗ ಸಮುದಾಯಕ್ಕೆ ರಾಜಕೀಯವಾಗಿ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು ಇದ್ದರು. ಪಟ ಕುಣಿತದ ಕಲಾವಿದ ಅಂಕನಹಳ್ಳಿ ಶಿವಣ್ಣ, ಸೌದತ್ತಿ ಯಲ್ಲಮ್ಮ ಗುಡ್ಡದಿಂದ ಬಂದಿದ್ದ ಹಿರಿಯ ಕಲಾವಿದರಾದ ಜೋಗತಿ ರಾಮಕ್ಕ, ಮಂಗಳ, ತಿಪ್ಪಸಂದ್ರದ ಶ್ಯಾಮಲಾ ತಂಡದವರು ಜೋಗತಿ ಕುಣಿತ ಪ್ರದರ್ಶಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT